ನವದೆಹಲಿ: 2019 ರ ಲೋಕಸಭಾ ಚುನಾವಣೆ ವೇಳೆ ತನ್ನ ಮಿತ್ರಪಕ್ಷ ಬಿಜೆಪಿಯೊಂದಿಗೆ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಜೆಡಿಯು, ಯಾವುದೇ ಕಾರಣಕ್ಕೂ ತನ್ನ ಮಾಜಿ ಮಿತ್ರಪಕ್ಷ ಆರ್ ಜೆಡಿಯೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.
ಜು.08 ರಂದು ನಡೆದ ಜೆಡಿಯು ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಸಲು ತೀರ್ಮಾನಿಸಿರುವ ಜೆಡಿಯು ಭ್ರಷ್ಟಾಚಾರದ ಆರೋಪ ಹೊತ್ತಿರುವ ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಇರಲು ನಿರ್ಧರಿಸಿದೆ. ಜೆಡಿಯು-ಬಿಜೆಪಿ ಮೈತ್ರಿಯ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಜೆಡಿಯು ಕಾರ್ಯಕಾರಿಣಿ ಸಭೆಯ ನಿರ್ಧಾರ ತೆರೆ ಎಳೆದಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ಹೇಳಿದ್ದಾರೆ.
ಈ ಬಗ್ಗೆ ಬಿಜೆಪಿ ನಾಯಕ ಸುಶೀಲ್ ಮೋದಿ ಸಹ ಟ್ವೀಟ್ ಮಾಡಿದ್ದು, ಜೆಡಿಯು ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos