ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಹಿಂದು ಮುಖ್ಯಮಂತ್ರಿಯನ್ನು ನೇಮಿಸಬೇಕು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ಮುಸ್ಲಿಮರೇ ಮುಖ್ಯಮಂತ್ರಿಯಾಗಬೇಕು ಎಂಬ ಸಂಪ್ರದಾಯವನ್ನು ಜವಹರ್ ಲಾಲ್ ನೆಹರು ಜಾರಿಗೆ ತಂದಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಅದನ್ನು ಕೊನೆಗೊಳಿಸಿ, ಪಿಡಿಪಿ ಹಿಂದೂ ಅಥವಾ ಸಿಖ್ ವ್ಯಕ್ತಿಯನ್ನು ಸಿಎಂ ಮಾಡಬೇಕು ಎಂದು ಹೇಳಿದ್ದಾರೆ.
ಮುಸ್ಲಿಮರನ್ನು ಮುಖ್ಯಮಂತ್ರಿಯಾಗುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿರುವ ಅವರು ಹಿಂದುತ್ವ ಘೋಷಣೆ ಭಾರತೀಯ ಜನತಾ ಪಕ್ಷಕ್ಕೆ ಸಹಾಯ ಮಾಡುತ್ತಿದೆ,ಆರ್ಥಿಕ ಅಭಿವೃದ್ಧಿ ಮತಗಳನ್ನು ತರುವುದಿಲ್ಲ. ಹಿಂದುತ್ವ, ಭ್ರಷ್ಟಾಚಾರ ಮುಕ್ತ ಸರ್ಕಾರ ಬಿಜೆಪಿ ನೀಡುತ್ತದೆ. ಅದಕ್ಕಾಗಿ 2014 ರ ಚುನಾವಣೆಯಲ್ಲಿ ಬಿಜೆಪಿ ಹಲವು ಸೀಟುಗಳನ್ನು ಗೆದ್ದಿದೆ ಎಂದು ಹೇಳಿದ್ದಾರೆ.
ಇಂಡಿಯಾಯ್ ಗ್ರಾಂಡ್ ನೆರೆಟಿವ್ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮಿ ಬಿಜೆಪಿ ನೀಡಿರುವ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇನ್ನು 5 ವರ್ಷ ಸಮಯ ಬೇಕು ಎಂದು ಹೇಳಿದ್ದಾರೆ.
2014ರಲ್ಲಿ ನೀಡಿದ ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಈಡೇರಿಸಲು ಸಾಧ್ಯವಾಗಿಲ್ಲ, ನಮಗೆ ಮತ್ತೆ ಐದು ವರ್ಷ ಅಧಿಕಾರ ಬೇಕು, ಆಗ ಪೂರ್ಣ ಪ್ರಮಾಣದಲ್ಲಿ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ,
ಪಿಡಿಪಿ ಜೊತೆ ಬಿಜೆಪಿ ಮೈತ್ರಿ ಮುರಿದುಕೊಂಡ ನಂತರ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics