ಜೆಡಿಯು-ಬಿಜೆಪಿ ಮೈತ್ರಿ ಬಿಹಾರಕ್ಕೆ ಮಾತ್ರ ಸೀಮಿತ: ನಿತೀಶ್ ಕುಮಾರ್
ಬಿಜೆಪಿ ಜೊತೆಗಿನ ಮೈತ್ರಿ ಬಿಹಾರಕ್ಕೆ ಮಾತ್ರ ಸೀಮಿತ ಎಂದು ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ...
ಪಾಟ್ನಾ: ಬಿಜೆಪಿ ಜೊತೆಗಿನ ಮೈತ್ರಿ ಬಿಹಾರಕ್ಕೆ ಮಾತ್ರ ಸೀಮಿತ ಎಂದು ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಬಿಹಾರದಲ್ಲಿ ಮಾತ್ರ ಜೆಡಿಯು-ಬಿಜೆಪಿ ಒಟ್ಟಿಗೆ ಕೆಲಸ ಮಾಡುತ್ತಿವೆ. ಆದರೆ ಬಿಹಾರ ಹೊರತುಪಡಿಸಿ ಇತರೆ ಕಡೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಚರ್ಚೆ ನಡೆದಿಲ್ಲ ಮತ್ತು ರಾಷ್ಟ್ರಮಟ್ಟದಲ್ಲೂ ಯಾವುದೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಬಿಹಾರ ಸಿಎಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಆರ್ ಜೆಡಿ ನೇತೃತ್ವದ ಮಹಾ ಮೈತ್ರಿ ಸೇರಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್, ಇಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವಾಗ ಮತ್ತೊಂದು ಪಕ್ಷದ ಜತೆ ಮೈತ್ರಿ ಅಸಾಧ್ಯ. ನಾವು ಮೈತ್ರಿ ಮಾಡಿಕೊಂಡಿರುವ ಪಕ್ಷದ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದರು.
ಇತ್ತೀಚಿಗಷ್ಟೇ ಆರ್ ಜೆಡಿ ನಾಯಕ ತೇಜಶ್ವಿ ಯಾದವ್ ಅವರು, ಮತ್ತೆ ನಿತೀಶ್ ಕುಮಾರ್ ಜೊತೆ ಮೈತ್ರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.