ಸುಪ್ರೀಂ ಕೋರ್ಟ್ 
ದೇಶ

ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ

ಅತ್ಯಾಚಾರ ಪ್ರಕರಣಗಳು, ವೈವಾಹಿಕ ಕೇಸುಗಳು ಮತ್ತು ಇನ್ ಕ್ಯಾಮರಾ ವಿಚಾರಣೆಗಳನ್ನು ...

ನವದೆಹಲಿ: ಅತ್ಯಾಚಾರ ಪ್ರಕರಣಗಳು, ವೈವಾಹಿಕ ಕೇಸುಗಳು ಮತ್ತು ಇನ್ ಕ್ಯಾಮರಾ ವಿಚಾರಣೆಗಳನ್ನು ಹೊರತುಪಡಿಸಿ ಇತರ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಕಲಾಪಗಳ ನೇರ ಪ್ರಸಾರವನ್ನು ದೇಶದ ಎಲ್ಲಾ ನ್ಯಾಯಾಲಯಗಳು ಮಾಡಬಹುದು ಎಂಬ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲಯದಲ್ಲಿ ಕೇಸು ವಿಚಾರಣೆಗಳ ನೇರ ಪ್ರಸಾರಕ್ಕೆ ಸಮಗ್ರ ಮಾರ್ಗಸೂಚಿಗಳನ್ನು ರಚಿಸುವುದಕ್ಕೆ ಸರ್ಕಾರದ ಅಟೊರ್ನಿ ಜನರಲ್ ಅವರಿಗೆ ಸಲಹೆಗಳನ್ನು ನೀಡುವಂತೆ ಹೇಳಿತ್ತು.

ನ್ಯಾಯಾಲಯಗಳಲ್ಲಿ ವಿಚಾರಣೆಗಳ ನೇರ ವೀಕ್ಷಣೆ, ವಿಡಿಯೊ ರೆಕಾರ್ಡಿಂಗ್ ಅಥವಾ ನ್ಯಾಯಾಂಗ ಪ್ರಕ್ರಿಯೆಗಳ ಲಿಪ್ಯಂತರಗಳ ಕುರಿತು ಸಲ್ಲಿಸಲಾಗಿದ್ದ ಮನವಿ ಬಗ್ಗೆ ತನ್ನ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಮೇ 3ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇದಕ್ಕೆ ಈ ಹಿಂದೆ ತನ್ನ ಅಭಿಪ್ರಾಯ ತಿಳಿಸಿದ್ದ ಸರ್ಕಾರ ಪರ ವಕೀಲರು ಹಲವು ದೇಶಗಳಲ್ಲಿ ನ್ಯಾಯಾಲಯ ಕಲಾಪಗಳ ನೇರ ವೀಕ್ಷಣೆ ಪದ್ಧತಿಯಿದೆ. ನ್ಯಾಯಾಲಯದಲ್ಲಿ ನಡೆಯುವ ಕಲಾಪಗಳಲ್ಲಿ ಇದರಿಂದ ಪಾರದರ್ಶಕತೆ ತರಬಹುದಾಗಿದೆ ಎಂದು ಹೇಳಿದ್ದಾರೆ.

 ಸಿಸಿಟಿವಿ ಕ್ಯಾಮರಾಗಳ ನಿಯೋಜನೆ, ಪ್ರತಿ ರಾಜ್ಯಗಳಲ್ಲಿ ತ್ವರಿತ ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳಲ್ಲಿ ಆಡಿಯೊ ಸಹಿತ ರೆಕಾರ್ಡ್ ಮಾಡುವುದಕ್ಕೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಅನುವು ಮಾಡಿಕೊಟ್ಟಿತ್ತು.

ಸುಪ್ರೀಂ ಕೋರ್ಟ್ ನ ಆವರಣದೊಳಗೆ ಕಲಾಪಗಳ ನೇರ ಪ್ರಸಾರ ಕೊಠಡಿ ಮತ್ತು ಕಾನೂನು ಸಹಾಯ ದೊರೆಯುವಂತೆ ವ್ಯವಸ್ಥೆ ಸ್ಥಾಪಿಸಬೇಕೆಂದು ಜೋಧ್ ಪುರದ ನ್ಯಾಶನಲ್ ಲಾ ಯೂನಿವರ್ಸಿಟಿಯ ಕಾನೂನು ವಿದ್ಯಾರ್ಥಿ ಸ್ವಪ್ನಿಲ್ ತ್ರಿಪಾಠಿ ಮತ್ತು ನ್ಯಾಯವಾದಿ ಇಂದಿರಾ ಜೈಸಿಂಗ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT