ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನೋಯ್ಡಾ: ಪ್ರಧಾನಿ ಮೋದಿ, ದಕ್ಷಿಣ ಕೊರಿಯಾ ಅಧ್ಯಕ್ಷರಿಂದ ಸ್ಯಾಮ್'ಸಂಗ್ ಮೊಬೈಲ್ ಉತ್ಪಾದನಾ ಘಟಕ ಉದ್ಘಾಟನೆ

ನೋಯ್ಡಾದಲ್ಲಿನ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್-ಜೆ-ಇನ್ ಜಂಟಿಯಾಗಿ ಉದ್ಘಾಟಿಸಿದ್ದಾರೆ.

ನೋಯ್ಡಾ: ವಿಶ್ವದ ಅತಿ ದೊಡ್ಡ ಮೊಬೈಲ್ ಉತ್ಪಾದನಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ-ದ.ಕೊರಿಯಾ ಅಧ್ಯಕ್ಷ
Srinivas Rao BV
Updated On : 9 Jul 2018, 7:57 am
ನೋಯ್ಡಾ: ನೋಯ್ಡಾದಲ್ಲಿನ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್-ಜೆ-ಇನ್ ಜಂಟಿಯಾಗಿ ಉದ್ಘಾಟಿಸಿದ್ದಾರೆ. 
ಸುಮಾರು 35 ಎಕರೆಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್, ಮೊಬೈಲ್ ಫ್ಯಾಕ್ಟರಿ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು,  2020 ರ ವೇಳೆಗೆ ಪ್ರತಿ ತಿಂಗಳಿಗೆ 10 ಮಿಲಿಯನ್ ಯುನಿಟ್ ಗಳಷ್ಟು ಮೊಬೈಲ್ ಗಳು ಈ ಉತ್ಪಾದನಾ ಘಟಕದಲ್ಲಿ ಉತ್ಪಾದನೆಯಾಗಲಿವೆ. 
ನೋಯ್ಡಾದಲ್ಲಿ ಉದ್ಘಾಟನೆಯಾಗಿರುವ ಮೊಬೈಲ್ ಉತ್ಪಾದನಾ ಘಟಕ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.  ನೋಯ್ಡಾದ ಸೆಕ್ಟರ್ 81 ರಲ್ಲಿ 1990 ರಲ್ಲಿ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಉಪಕರಣಗಳ ಉತ್ಪಾದನಾ ಘಟಕವನ್ನು ಪ್ರಾರಂಭಿಸಲಾಗಿತ್ತು ಈ ಬಳಿಕ 1997 ರಲ್ಲಿ ಸ್ಯಾಮ್ ಸಂಗ್ ಟಿವಿ ಉತ್ಪಾದನೆಯನ್ನೂ ಪ್ರಾರಂಭಿಸಲಾಯಿತು. ಈಗಿರುವ ಮೊಬೈಲ್ ಉತ್ಪಾದನಾ ಘಟಕವನ್ನು 2005 ರಲ್ಲಿ ಪ್ರಾರಂಭಿಲಾಗಿದ್ದು, ಮತ್ತಷ್ಟು ಅಭಿವೃದ್ಧಿಗೊಳಿಸಲಾಗಿದೆ.  ಕಳೆದ ವರ್ಷ ಸ್ಯಾಮ್ ಸಂಗ್ ಸಂಸ್ಥೆ ನೋಯ್ಡಾದ ಉತ್ಪಾದನಾ ಘಟಕದಲ್ಲಿ 4,915 ಕೋಟಿ ರೂಪಾಯಿ ಹೂಡಿಕೆ ಮಾಡಿ ಉತ್ಪಾದನೆಯನ್ನು ದ್ವಿಗುಣಗೊಳಿಸಲು ತೀರ್ಮಾನಿಸಿತ್ತು, ಅದಂತೆಯೇ ಈಗ ಹೊಸ ಉತ್ಪಾದನಾ ಘಟಕವನ್ನೂ ಪ್ರಾರಂಭಿಸಲಾಗಿದ್ದು ವಿಶ್ವದ ಅತಿ ದೊಡ್ಡ ಮೊಬೈಲ್ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments