ನವದೆಹಲಿ: ರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸಹಾಯಧನದಲ್ಲಿ ಸಮಾಜದ ದುರ್ಬಲವರ್ಗದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸುಪ್ರೀಂಕೋರ್ಟ್ ಇಂದು ಆದೇಶ ಜಾರಿಗೊಳಿಸಿದೆ.
ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಶೇ.25 ರಷ್ಟು ಹೊರರೋಗಿಗಳಿಗೆಉಚಿತ ಚಿಕಿತ್ಸೆ ನೀಡಬೇಕೆಂದು ವಿಭಾಗೀಯ ನ್ಯಾಯಾಲಯ ಹೇಳಿದೆ. ಒಳರೋಗಿಯ ಶೇ, 10 ರಷ್ಟು ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶಿಸಲಾಗಿದೆ.
ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಇದನ್ನು ಉಲ್ಲಂಘಿಸಿದ್ದರೆ ಅಂತಹ ಆಸ್ಪತ್ರೆಗಳ ಗುತ್ತಿಗೆಯನ್ನು ರದ್ದುಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಕಾಲ ಕಾಲಕ್ಕೆ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ತಿಳಿಸಿದೆ.