ದೇಶ

ಸಮಾಜದಲ್ಲಿ ಕಾನೂನು, ಸುವ್ಯವಸ್ಥೆ ಕುಸಿದಿದೆ: ನಿರ್ಭಯಾ ತಾಯಿ

Shilpa D
ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ಇಂದು ಹೊರ ಬೀಳಲಿದೆ, ಇದೇ ವೇಳೆ ಮಾತನಾಡಿರುವ ನಿರ್ಭಯ ತಾಯಿ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ 2012ರ ದೆಹಲಿ ಗ್ಯಾಂಗ್ ರೇಪ್ ಸಂತ್ರಸ್ತೆ ನಿರ್ಭಯಾ ತಾಯಿ ಆಶಾದೇವಿ, ಘಟನೆ ನಡೆದು ಆರು ವರ್ಷಗಳಾಗಿವೆ, ದೇಶದ ಹಲವೆಡೆ ಪ್ರತಿದಿನ ಇಂಥಹುದ್ದೇ ಘಟನೆಗಳು ನಡೆಯುತ್ತಿವೆ, ಇವುಗಳನ್ನು ತಡೆಯುವಲ್ಲಿ ನಮ್ಮ ವ್ಯವಸ್ಥೆ ವಿಫಲವಾಗಿದೆ, ಹಲವು ವರ್ಷಗಳ ನಂತರವೂ ಮಹಿಳೆಯರ ಮೇಲೆ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿವೆ, ತೀರ್ಪು ಪ್ರಕಟಿಸುವ ಸುಪ್ರೀಂ ಕೋರ್ಟ್ ಆಪರಾಧಿಗಳ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಎಲ್ಲಾ ಅಪರಾಧಿಗಳಿಗೂ ಗಲ್ಲು ಶಿಕ್ಷೆ ಕಡಿಮೆಯೇ ಸುಪ್ರೀಂಕೋರ್ಟ್ ನೀಡುವ ತೀರ್ಪು ಎಲ್ಲರಿಗೂ ಉದಾಹರಣೆಯಾಗಿರಬೇಕು ಎಂದು ಹೇಳಿದ್ದಾರೆ,.
ಇನ್ನೂ ನಿರ್ಭಯಾ ತಂದೆ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ  ಒದಗಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ,.
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಮಗೆ ನೀಡಲಾಗಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಮೂವರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ.
ಅಪರಾಧಿಗಳಾದ ಪವನ್‌ ಗುಪ್ತಾ (22), ವಿನಯ್‌ ಶರ್ಮ (23) ಮುಕೇಶ್‌ (29) ಮತ್ತು ಅಕ್ಷಯ್ ಕುಮಾರ್ ಸಿಂಗ್‌ಗೆ (31) ಗಲ್ಲು ಶಿಕ್ಷೆ ವಿಧಿಸಿತ್ತು. ಅಕ್ಷಯ್‌ ಹೊರತು ಪಡಿಸಿ ಉಳಿದ ಮೂವರು ಅಪರಾಧಿಗಳು ತಮಗೆ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 
SCROLL FOR NEXT