ಚೆನ್ನೈ: ತಮಿಳುನಾಡು ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ಲೋಕಾಯುಕ್ತ ಮಸೂದೆ ಮಂಡಿಸಿದ್ದು, ಕೊನೆಗೂ ಭ್ರಷ್ಟಾಚಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.
ಮೀನುಗಾರಿಕೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವ ಡಿ ಜಯಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ತಮಿಳುನಾಡು ಲೋಕಾಯುತ್ತ ವಿಧೇಯಕ 2018 ಅನ್ನು ಮಂಡಿಸಿದರು.
ವಿಧೇಯಕ ಅಂಗೀಕಾರಗೊಂಡ ನಂತರ, ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಲೋಕಾಯುಕ್ತ ಸಂಸ್ಥೆ ಸ್ಥಾಪನೆಯಾಗಲಿದೆ.
ರಾಜ್ಯ ಸರ್ಕಾರದ ಅಧಿಕಾರಿಗಳು, ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ವಿರುದ್ಧ ತನಿಖೆಗೆ ನಡೆಸಲು ಲೋಕಾಯುಕ್ತರಿಗೆ ಅಧಿಕಾರ ನೀಡಲಾಗಿದೆ.
2013ರಲ್ಲಿ ಕೇಂದ್ರ ಸರ್ಕಾರ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ ಜಾರಿಗೆ ತಂದಿದ್ದು, ಅದರಂತೆ ಎಲ್ಲಾ ರಾಜ್ಯಗಳ ಕಡ್ಡಾಯವಾಗಿ ಲೋಕಾಯುಕ್ತ ಸಂಸ್ಥೆ ಹೊಂದಿರಬೇಕು. ಹೀಗಾಗಿ ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆ ಸ್ಥಾಪನೆಗೆ ನಿರ್ಧರಿಸಿದ್ದು, ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸಲಿದೆ ಎಂದು ಜಯಕುಮಾರ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos