ಪತ್ನಿ ಮೇಲಿನ ಕೋಪಕ್ಕೆ 3 ವರ್ಷದ ಮಗುವನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡ ವ್ಯಕ್ತಿ 
ದೇಶ

ಪತ್ನಿ ಮೇಲಿನ ಕೋಪಕ್ಕೆ 3 ವರ್ಷದ ಮಗುವನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡ ತಂದೆ!

ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಪತ್ನಿ ಮೇಲಿನ ಕೋಪಕ್ಕೆ ಮೂರು ವರ್ಷದ ಮಗನನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ...

ಹೈದರಾಬಾದ್: ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಪತ್ನಿ ಮೇಲಿನ ಕೋಪಕ್ಕೆ ಮೂರು ವರ್ಷದ ಮಗನನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 
ಆಟೋ ರಿಕ್ಷಾ ಚಾಲಕನಾಗಿರುವ ಶಿವ ಗೌಡ್ (40) ಮಗುವನ್ನು ಆಟೋಗೆ ಬಡಿದು ಆಕ್ರೋಶ ವ್ಯಕ್ತಪಡಿಸುವ ವ್ಯಕ್ತಿಯಾಗಿದ್ದಾನೆ. ಘಟನೆ ಬಳಿಕ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. 
ಆರೋಪಿ ಶಿವ ಗೌಡ್ ಕುಡಿದ ಮತ್ತಿನಲ್ಲಿ ಭಾನುವಾರ ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ಈ ವೇಳೆ ಪತ್ನಿ ಮೇಲಿನ ಕೋಪಕ್ಕೆ ತನ್ನ ಮೂರು ವರ್ಷದ ಮಗುವನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡಿದ್ದಾನೆ. ಘಟನೆಯ ದೃಶ್ಯಾವಳಿಗಳು ಸ್ಥಲೀಯ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದೆ. ವಿಡಿಯೋ ಕುರಿತಂತೆ ಸಾಕಷ್ಟು ಆಕ್ರೋಶ ಹಾಗೂ ಟೀಕೆಗಳು ವ್ಯಕ್ತವಾಗತೊಡಗಿವೆ.
ಘಟನೆಯಲ್ಲಿ ಮಗು ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಮಗುವನ್ನು ಇದೀಗ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ. 
ಘಟನೆ ಕುರಿತಂತೆ ಮಗುವಿನ ತಾಯಿ ತನ್ನ ಪತಿ ವಿರುದ್ಧ ದೂರು ದಾಖಲಿಸಲು ಹಿಂಜರಿಯುತ್ತಿರುವ ಹಿನ್ನಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿರುವ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!