ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸುತ್ತಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಕುಂದಾಲನ್ ಎಂಬ ಪ್ರದೇಶದಲ್ಲಿರುವ ಮನೆಯೊಂದರಲ್ಲಿ 5-6 ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ಉಗ್ರರು ಅಡಗಿ ಕುಳಿತಿರುವ ಹಿನ್ನಲೆಯಲ್ಲಿ ಸ್ಥಳೀಯ ಮನೆಗಳಲ್ಲಿರುವ ನಾಗರೀಕರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿದ್ದು, ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಉಗ್ರರಿಗಾಗಿ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ತಿಳಿದುಬಂದಿದೆ.