ನವದೆಹಲಿ: ಕೇಂದ್ರ ಸರ್ಕಾರ ಸೋಮವಾರಪ ಬಿಡುಗಡೆ ಮಾಡಿರು ಶ್ರೇಷ್ಠ ಶಿಕ್ಷಣ ಸಂಸ್ಥೆಗಳ ಪಟ್ಟಿ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಇನ್ನೂ ನಿರ್ಮಾಣವೇ ಆಗಿರದ ಜಿಯೋ ಶಿಕ್ಷಣ ಸಂಸ್ಥೆಗೂ ಶ್ರೇಷ್ಠ ಗುಣಮಟ್ಟದ ಶಿಕ್ಷಣ ಸಂಸ್ಥೆ ಎಂಬ ಮಾನ್ಯತೆ ನೀಡಿರುವುದು ಹಲವರ ಶಂಕೆಗೆ ಕಾರಣವಾಗಿದೆ.
ಸೋಮವಾರ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮೂರು ಖಾಸಗಿ ಮತ್ತು ಮೂರು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಶ್ರೇಷ್ಠ ಶಿಕ್ಷಣ ಸಂಸ್ಥೆಗಳ ಪಟ್ಟಿಗೆ ಸೇರಿಸಲಾಗಿದ್ದು, ಈ ಪೈಕಿ ಎರಡು ಪ್ರತಿಷ್ಠಿತ ಐಐಟಿ ಸಂಸ್ಥೆಗಳು ಮತ್ತು ಬೆಂಗಳೂರಿನ ಐಐಎಸ್ ಸಿ ಶಿಕ್ಷಣ ಸಂಸ್ಥೆ ಸೇರಿದೆ. ಆದರೆ ಇದೀಗ ಮಾನವ ಸಂಪನ್ಮೂಲ ಇಲಾಖೆ ಪ್ರಕಟಿಸಿರುವ ಪಟ್ಟಿಯಲ್ಲಿ ಪಿಲಾನಿ, ಆಳ್ವಾಸ್, ಮಣಿಪಾಲ ಸೇರಿದಂತೆ ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳೂ ಕೂಡ ಸೇರಿದ್ದು, ಈ ಪೈಕಿ ಇನ್ನೂ ನಿರ್ಮಾಣವೇ ಆಗಿರದ ರಿಲಯನ್ಸ್ ಸಂಸ್ಥೆಯ ಒಡೆತನದ ಜಿಯೋ ಶಿಕ್ಷಣ ಸಂಸ್ಛೆ ಕೂಡ ಪಟ್ಟಿಯಲ್ಲಿ ಸ್ಥಾನ ಸಂಪಾದಿಸಿರುವುದು ಹಲವರ ಹುಬ್ಬೇರಿಸಿದೆ.
ಶ್ರೇಷ್ಠ ಶಿಕ್ಷಣ ಸಂಸ್ಥೆ ಸ್ಥಾನಮಾನಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ನೇಮಕ ಮಾಡಿದ್ದ ನಿವೃತ್ತಿ ಚುನಾಣಾ ಆಯೋಗದ ಆಯುಕ್ತ ಎನ್ ಗೋಪಾಲಸ್ವಾಮಿ ನೇತೃತ್ವದ ಈ ಶ್ರೇಷ್ಠ ಶಿಕ್ಷಣ ಸಂಸ್ಥೆಗಳ ಆಯ್ಕೆ ಮಾಡಿದ್ದು, ಆಯೋಗ ಒಟ್ಟು 800 ಶಿಕ್ಷಣ ಸಂಸ್ಥೆಗಳ ಪೈಕಿ 200 ಉನ್ನತ ಶಿಕ್ಷಣ ಸಂಸ್ಥೆಗಳನ್ನು ಶ್ರೇಷ್ಠ ಶಿಕ್ಷಣ ಸಂಸ್ಥೆಗೆ ಪರಿಗಣಿಸಲಾಗಿದ್ದು, ಈ ಪೈಕಿ 20 ಶಿಕ್ಷಣ ಸಂಸ್ಥೆಗಳಿಗೆ ಶ್ರೇಷ್ಠ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡಲಾಗಿದೆ. ಆಯೋಗ ಬಿಡುಗಡೆ ಮಾಡಿರುವ ಶಿಕ್ಷಣ ಸಂಸ್ಥೆಗಳ ಪಟ್ಟಿ ಇದೀಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಇನ್ನು ಆಸ್ಥಿತ್ವಕ್ಕೇ ಬಾರದ ಜಿಯೋ ಶಿಕ್ಷಣ ಸಂಸ್ಥೆಗೂ ಶ್ರೇಷ್ಠ ಶಿಕ್ಷಣ ಸಂಸ್ಥೆ ಸ್ಥಾನಮಾನ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಮುಖವಾಗಿ ಮದ್ರಾಸ್ ಐಐಟಿ, ಖರಗ್ ಪುರ ಐಐಟಿಯಂತಹ ಶಿಕ್ಷಣ ಸಂಸ್ಥೆಗಳನ್ನು ಪಕ್ಕಕ್ಕೆ ತಳ್ಳಿ ಇನ್ನೂ ಅಸ್ಥಿತ್ವಕ್ಕೇ ಬಾರದ ಜಿಯೋ ಶಿಕ್ಷಣ ಸಂಸ್ಥೆಗೆ ಹೇಗೆ ಶ್ರೇಷ್ಠತೆ ಸ್ಥಾನಮಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯಡವಟ್ಟು ಇದೀಗ ಟ್ವಿಟರ್ ನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಲವು ಟ್ವೀಟಿಗರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.