ಸಂಗ್ರಹ ಚಿತ್ರ 
ದೇಶ

ರೈಲು ನಿಲ್ದಾಣದಲ್ಲಿ ವ್ಯಕ್ತಿಯಿಂದ ಹಸ್ತಮೈಥುನ, ಮಹಿಳೆಯಿಂದ ಫೇಸ್ಬುಕ್ ಲೈವ್!

ರೈಲು ನಿಲ್ದಾಣದಲ್ಲೇ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದು ಇದನ್ನು ಗಮನಿಸಿದ ಮಹಿಳೆ ಫೇಸ್ಬುಕ್ ನಲ್ಲಿ ಲೈವ್ ಮಾಡಿದ್ದಾರೆ...

ಕೋಲ್ಕತ್ತಾ: ರೈಲು ನಿಲ್ದಾಣದಲ್ಲೇ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದು ಇದನ್ನು ಗಮನಿಸಿದ ಮಹಿಳೆ ಫೇಸ್ಬುಕ್ ನಲ್ಲಿ ಲೈವ್ ಮಾಡಿದ್ದಾರೆ. 
ಪಶ್ಚಿಮ ಬಂಗಾಳದ ಬಂಡೇಲ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಸಂಜೆ ಮಧ್ಯ ವಯಸ್ಸಿನ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳಲು ಆರಂಭಿಸಿದ್ದ ಇದನ್ನು ಗಮನಿಸಿದ ಮಹಿಳೆಯೊರ್ವಳಲು ಇದನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದು ಇದೀಗ ವೈರಲ್ ಆಗಿದೆ. 
ರೈಲು ಹೊರಡಲು ಅಣಿಯಾಗಿದ್ದರಿಂದ ಮಹಿಳೆ ಇದನ್ನು ಪ್ರತಿಭಟಿಸಲು ಮುಂದಾಗಲಿಲ್ಲ, ಆದರೆ ಮೊಬೈಲ್ ತೆಗೆದು ವ್ಯಕ್ತಿಯ ಅನುಚಿತ ವರ್ತನೆಯನ್ನು ಫೇಸ್ ಬುಕ್ ಲೈವ್ ಮಾಡಿದ್ದಾಳೆ. ಪ್ರಸ್ತುತ ಪ್ರತಿಯೊಂದಕ್ಕೂ ಸಾಕ್ಷಿ ಕೇಳುತ್ತಾರೆ, ಹಾಗಾಗಿ ಲೈವ್ ಮಾಡಿದೆ ಎಂದು ಮಹಿಳೆ ಹೇಳಿದ್ದಾರೆ. 
ಲೈವ್ ವೀಕ್ಷಿಸಿದ ಕೆಲ ಮಹಿಳೆಯರು ಇದನ್ನು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮಾನಸಿಕ ಅಸ್ವಸ್ಥನಂತೆ ತೋರುತ್ತಿದ್ದ ವ್ಯಕ್ತಿ ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ. ಇನ್ನು ಮಹಿಳೆ ಇದನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದು ಒಂದಿಷ್ಟು ಜನರಿಗೆ ಇರಿಸು ಮುರಸು ತಂದರೂ ಮಹಿಳೆ ಮಾಡಿದ್ದು ಸರಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್