ದೇಶ

ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪೆಲ್ಲೆಟ್ ದಾಳಿ; ಯುವಕ ಸಾವು, 20 ಮಂದಿಗೆ ಗಾಯ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಮಂಗಳವಾರ ಪ್ರತಿಭಟನಾಕಾರರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿಯ ವೇಳೆ ಗಾಯಗೊಂಡಿದ್ದ ಯುವಕ ತಮಶೀಲ್ ಅಹಮ್ಮದ್ ಖಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಶೋಪಿಯಾನ್ ಜಿಲ್ಲೆಯ ಕುಂದಲನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ನೂರಾರು ಗ್ರಾಮಸ್ಥರು, ಭದ್ರತಾ ಪಡೆಗಳ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮತ್ತು ಸೇನಾಪಡೆ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಷೇಲ್ ಗಳನ್ನು ಸಿಡಿಸಿದರು. ಪೆಲೆಟ್ ಗುಂಡು ಮತ್ತು ಗುಂಡಿನ ದಾಳಿ ನಡೆಸಿ ಜನರನ್ನು ಚೆದುರಿಸಿದರು.
ಶೋಪಿಯಾನ್ ಜಿಲ್ಲೆಯ ಕುಂದಾಲನ್ ಎಂಬ ಪ್ರದೇಶದಲ್ಲಿರುವ ಮನೆಯೊಂದರಲ್ಲಿ 5-6 ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು.
SCROLL FOR NEXT