ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಪಘಾತವಾಗಿ ನರಳಾಡುತ್ತಿದ್ದರು ಮಾನವೀಯತೆ ಮರೆತ ಜನರಿಂದ ಸೆಲ್ಫಿಗೆ ಫೋಸ್, 3 ದುರ್ಮರಣ!

ಲ್ಫಿ ಎಂಬ ಮಾಯಾಜಾಲ ಮನುಷ್ಯತ್ವವನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಸೆಲ್ಫಿ ಮೋಹಕ್ಕೆ ಸಿಲುಕದವರಿಲ್ಲ ಎನ್ನಬಹುದಾದ ಪರಿಸ್ಥಿತಿ ಸದ್ಯದ ಮಟ್ಟಿಗೆ ಅಂತು ಕಾಣಸಿಗುತ್ತಿದೆ...

ಸಂಗ್ರಹ ಚಿತ್ರ
Vishwanath S
Updated On : 11 Jul 2018, 1:04 am
ಜೈಸಾಲ್ಮೆರ್: ಸೆಲ್ಫಿ ಎಂಬ ಮಾಯಾಜಾಲ ಮನುಷ್ಯತ್ವವನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಸೆಲ್ಫಿ ಮೋಹಕ್ಕೆ ಸಿಲುಕದವರಿಲ್ಲ ಎನ್ನಬಹುದಾದ ಪರಿಸ್ಥಿತಿ ಸದ್ಯದ ಮಟ್ಟಿಗೆ ಅಂತು ಕಾಣಸಿಗುತ್ತಿದೆ. 
ಬರ್ಮೆರ್ ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೂವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಸ್ಕೂಲ್ ಬಸ್ ವೊಂದು ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಪರ್ಮನಂದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗೇಮರಾಮ್ ಮತ್ತು ಚಂದರಾಮ್ ಎಂಬುವರು ತೀವ್ರತರ ಗಾಯದಿಂದ ನಡುರಸ್ತೆಯಲ್ಲೇ ಒದ್ದಾಡುತ್ತಿದ್ದರು. ಸಹಾಯಕ್ಕೆ ಬಾರದ ಜನತೆ ಸೆಲ್ಫಿ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. 
ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಗೇಮರಾಮ್ ಮತ್ತು ಚಂದರಾಮ್ ಒಂದು ಗಂಟೆಗೂ ಹೆಚ್ಚು  ಕಾಲ ಜೀವದ ಜತೆ ಹೋರಾಟ ನಡೆಸಿ ಮೃತಪಟ್ಟಿದ್ದಾರೆ. ಸಹಾಯಕ್ಕೆ ಮುಂದಾಗಬೇಕಿದ್ದ ಜನರು ಮಾತ್ರ ಸೆಲ್ಫಿ ಮತ್ತು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಸರಿಯಾದ ಸಮಯಕ್ಕೆ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

Advertisement

Advertisement

ಗುಜರಾತ್ ಸಿಮೆಂಟ್ ಫ್ಯಾಕ್ಟರಿಯಲ್ಲಿ ಈ ಮೂವರು ದಿನಗೂಲಿಗಳಾಗಿ ಕೆಲಸ ಮಾಡುತ್ತಿದ್ದರು. ಕೆಲಸ ನಿಮಿತ್ತ ರಾಜಸ್ತಾನಕ್ಕೆ ಬಂದಿದ್ದ ಇವರು ಗುಜರಾತ್ ಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments