ಮಣಿಪುರದಲ್ಲಿ ಭೂ ಕುಸಿತ: 7 ಮಕ್ಕಳು ಸೇರಿ 9 ಮಂದಿ ಸಾವು 
ದೇಶ

ಮಣಿಪುರದಲ್ಲಿ ಭೂ ಕುಸಿತ: 7 ಮಕ್ಕಳು ಸೇರಿ 9 ಮಂದಿ ಸಾವು

ಕೆಲ ದಿನಗಳಿಂದ ಸುರಿಯುತ್ತಿರುವ ಸುದೀರ್ಘ ಮಳೆಯಿಂದಾಗಿ ಮಣಿಪುರದಲ್ಲಿ ಭೂಕುಸಿತ ಸಂಭವಿಸಿದ್ದು, ಪರಿಣಾಮ 7 ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ತಮೆಂಗ್'ಲೊಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...

ಗುವಾಹಣಿ: ಕೆಲ ದಿನಗಳಿಂದ ಸುರಿಯುತ್ತಿರುವ ಸುದೀರ್ಘ ಮಳೆಯಿಂದಾಗಿ ಮಣಿಪುರದಲ್ಲಿ ಭೂಕುಸಿತ ಸಂಭವಿಸಿದ್ದು, ಪರಿಣಾಮ 7 ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ತಮೆಂಗ್'ಲೊಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. 
ಭೂ ಕುಸಿತದ ಪರಿಣಾಮ ನ್ಯೂ ಸಲೇಮ್ ಮತ್ತು ನಿಗೆಲುವಾಂಗ್ ಗ್ರಾಮದಲ್ಲಿರುವ ಕೆಲ ಮನೆಗಳು ಕುಸಿದು ಬಿದ್ದಿದ್ದು, ಈ ಹಿನ್ನಲೆಯಲ್ಲಿ ಸ್ಥಳದಲ್ಲಿದ್ದ 7 ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಒಂದು ಘಟನೆಯಲ್ಲಿ ಒಂದೇ ಕುಟುಂಬದ ಐವರು ಮಕ್ಕಳು ಸಾವನ್ನಪ್ಪಿದ್ದರೆ, ಮತ್ತೊಂದು ಘಟನೆಯಲ್ಲಿ ಮಣ್ಣು ಮಿಶ್ರಿತ ನೀರಿನಲ್ಲಿ ಹೋಗುತ್ತಿದ್ದ ವೇಳೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ ತಾಯಿ ಮತ್ತು ಮಗ ಮಲಗಿದ್ದ ಸಂದರ್ಭದಲ್ಲಿ ಮನೆಗೆ ಕುಸಿದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಮೆಂಗ್ಲಾಂಗ್ ಡಿಸಿ ರವೀಂದರ್ ಸಿಂಗ್ ಅವರು, ಭೂಕುಸಿತ ಸಂಭವಿಸಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಮಣಿಪುರ ಸೇರಿ ಇಲ್ಲಿನ ಈಶಾನ್ಯ ಪ್ರದೇಶಗಳಲ್ಲಿ ಹಲವು ದಿನಗಳಿಂದಲೂ ಭಾರೀ ಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ