ದೇಶ

ಹತ್ಯೆ ಅಪರಾಧಿಗಳಿಗೆ ಹಾರ: ಕೇಂದ್ರ ಸಚಿವ ಜಯಂತ್ ಸಿನ್ಹಾ 'ವಿಷಾದ'

Lingaraj Badiger
ನವದೆಹಲಿ: ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜಯಂತ್‌ ಸಿನ್ಹಾ ಅವರು ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿದ್ದು, ಆ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಾನೂನು ಕ್ರಮ ತೆಗೆದುಕೊಳ್ಳಲದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಶಿಕ್ಷೆಯಾಗಬಾರದು ಎಂದು ನಾವು ಸದಾ ಕೆಲಸ ಮಾಡುತ್ತೇವೆ. ನಾನು ಆರೋಪಿಗಳಿಗೆ ಹಾರ ಹಾಕುವುದರಿಂದ ಹತ್ಯೆಗೆ ಬೆಂಬಲ ನೀಡಿದಂತಾಗುತ್ತದೆ ಎನ್ನುವದಾದರೆ, ಆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಅಲಿಮುದ್ದೀನ್ ಅನ್ಸಾರಿ ಎಂಬ ದನಗಳ ವ್ಯಾಪಾರಿಯ ಹತ್ಯೆ ಆರೋಪದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಗಳಿಗೆ ಜಯಂತ್‌ ಸಿನ್ಹಾ ಸನ್ಮಾನ ಮಾಡಿದ ಫೋಟೋ ಜುಲೈ 6ರಂದು ವೈರಲ್ ಆಗಿತ್ತು.
ಸಿನ್ಹಾ ಸನ್ಮಾನಕ್ಕೆ ಪ್ರತಿಪಕ್ಷಗಳಿಂದ ಮಾತ್ರವಲ್ಲದೆ ಸ್ವಪಕ್ಷ ಮತ್ತು ಅವರ ತಂದೆ ಯಶವಂತ್ ಸಿನ್ಹಾ ಅವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.
SCROLL FOR NEXT