ಶಶಿ ತರೂರ್ 
ದೇಶ

ತರೂರ್ ವಿವಾದಾತ್ಮಕ ಹೇಳಿಕೆ:ಮಾತಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಾಂಗ್ರೆಸ್ ಸೂಚನೆ

ಸಂಸದ ಶಶಿ ತರೂರ್ ಹಿಂದೂ-ಪಾಕಿಸ್ತಾನ ಹೇಳಿಕೆಗೆ ಕಾಂಗ್ರೆಸ್ ಅಸಮ್ಮತಿ ವ್ಯಕ್ತಪಡಿಸಿದ್ದು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಬಳಸುವ ಮಾತಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖಂಡರಿಗೆ ಸೂಚನೆ ನೀಡಿದೆ.

ನವದೆಹಲಿ: ಸಂಸದ ಶಶಿ ತರೂರ್ ಹಿಂದೂ-ಪಾಕಿಸ್ತಾನ ಹೇಳಿಕೆಗೆ ಕಾಂಗ್ರೆಸ್  ಅಸಮ್ಮತಿ ವ್ಯಕ್ತಪಡಿಸಿದ್ದು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಬಳಸುವ ಮಾತಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖಂಡರಿಗೆ ಸೂಚನೆ ನೀಡಿದೆ.

2019ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಸಂವಿಧಾನವನ್ನು ಮತ್ತೆ ಬರೆಯಲಿದೆ.ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ನಿನ್ನೆ ಶಶಿ ತರೂರ್ ನೀಡಿದ್ದ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು.

ಶಶಿ ತರೂರ್ ಹೇಳಿಕೆ ಕುರಿತಂತೆ ಸರಣಿ ಟ್ವಿಟ್ ಪ್ರಕಟಿಸಿರುವ ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ  ರಣದೀಪ್ ಸುರ್ಜೀವಾಲಾ, ಬಿಜೆಪಿಯ ದ್ವೇಷವನ್ನು ತಿರಸ್ಕರಿಸುವ ಭರದಲ್ಲಿ  ಮಾತನಾಡುವಾಗ ಎಲ್ಲಾ ಕಾಂಗ್ರೆಸ್ ಮುಖಂಡರು ನಮ್ಮ ಮೇಲೆ ಇರುವ  ಐತಿಹಾಸಿಕ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಮೋದಿ ಸರ್ಕಾರದ ಮೇಲೆ ಸುರ್ಜಿವಾಲಾ ದಾಳಿ ನಡೆಸಿದ್ದು, ಕಳೆದ ನಾಲ್ಕು ವರ್ಷಗಳಿಂದಲೂ ವಿಭಾಗ, ಧರ್ಮಾಂಧತೆ, ದ್ವೇಷ, ಅಸಹಿಷ್ಣುತೆ ಮತ್ತು ಧ್ರುವೀಕರಣದ ಅಭೂತಪೂರ್ವ ವಾತಾವರಣ" ದಲ್ಲಿ ಅದು ಬೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

ನಂಬಿಕೆಗಳು ಮತ್ತು ಜನಾಂಗಗಳ ನಡುವಿನ ಬಹುಸಂಖ್ಯಾತ, ವೈವಿಧ್ಯತೆ, ಸಹಾನುಭೂತಿ ಮತ್ತು ಸಾಮರಸ್ಯದ ಭಾರತದ ನಾಗರಿಕ ಮೌಲ್ಯಗಳನ್ನು ಕಾಂಗ್ರೆಸ್ ಪ್ರತಿನಿಧಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಾಂಗ್ರೆಸ್ ವಕ್ತಾರ ಜೈವೇರ್ ಶೆರ್ಗಿಲ್ ಅವರು ಅಧಿಕಾರಕ್ಕೆ ಬಂದ ಸರಕಾರವನ್ನು ಹೊರತುಪಡಿಸಿ ಭಾರತದ ಪ್ರಜಾಪ್ರಭುತ್ವವು ಪಾಕಿಸ್ತಾನ ಆಗಲು ಎಂದಿಗೂ ಅನುಮತಿಸುವುದಿಲ್ಲ ಎಂದು ತಿಳಿಸಿದ್ದಾರೆ.

 ಈ ಮಧ್ಯೆ  ಶಶಿ ತರೂರ್ ಹೇಳಿಕೆ  ಭಾರತ ಪ್ರಜಾಪ್ರಭುತ್ವ ಹಾಗೂ ಹಿಂದೂಗಳನ್ನು ಅವಮಾನಿಸಿದ್ದು,  ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಕ್ಷಮೆ ಕೇಳಬೇಕೆಂದು  ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT