ಕುಪ್ವಾರ; ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ತ್ರೆಹ್ಗಾಮ್ ಪ್ರದೇಶದಲ್ಲಿ ಎಂಬ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಬಳಿಕ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಸೇನಾ ಪಡೆ ಸ್ಥಳವನ್ನು ಸುತ್ತುವರೆಗೂ ಎನ್ ಕೌಂಟರ್ ನಡೆಸಲು ಆರಂಭಿಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಉಗ್ರನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ನಡುವಲ್ಲೇ ಶೋಪಿಯಾನ್'ನ ಅಹ್ಗಾಮ್ ಎಂಬ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದ ಸೇನಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics