ನಿತೀಶ್ ಕುಮಾರ್ ಮತ್ತು ಅಮಿತ್ ಶಾ (ಸಂಗ್ರಹ ಚಿತ್ರ)
ಪಾಟ್ನಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಿಹಾರ ಪ್ರವಾಸದಲ್ಲಿರುವ ಅಮಿತ್ ಶಾ ಬೆಳಗಿನ ಉಪಹಾರದ ವೇಳೆ ನಿತೀಶ್ ಕುಮಾರ್ ಜೊತೆ ಚರ್ಚಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಯನ್ನು ಮತ್ತಷ್ಟು ಬಲವರ್ಧಿಸುವ ಹಾಗೂ ಎರಡು ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಯಿತು.
2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಬಿಜೆಪಿ ಸೀಟು ಹಂಚಿಕೆ ಸಂಬಂಧ ಇಬ್ಬರು ಮಾತುಕತೆ ನಡೆಸಿದ್ದಾರೆಂದು ಹೇಳಲಾಗಿದೆ.ಇದೊಂದು ಸೌಜನ್ಯಯಿತ ಭೇಟಿಯಾಗಿದೆ, ನಮ್ಮ ಎರಡು ಪಕ್ಷಗಳ ನಡುವೆ ಉತ್ತಮ ಹೊಂದಾಣಿಕೆಯಿದೆ, ನಾಯಕರಲ್ಲಿ ಯಾವುದೇ ಒಳಜಗಳವಿಲ್ಲ ಎಂದು ಬಿಜೆಪಿ ಸಂಸದ ಸಿಪಿ ಠಾಕೂರ್ ಹೇಳಿದ್ದಾರೆ,
ಲೋಕಸಭೆ ಚುನಾವಣೆ ಸೀಟು ಹಂಚಿಕೆ ಸಂಬಂಧ 2 ಪಕ್ಷಗಳಲ್ಲಿ ಒಳಜಗಳ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು, ಹೆಚ್ಚಿನ ಸೀಟುಗಳಿಗಾಗಿ ಜೆಡಿಯು ಪಟ್ಟು ಹಿಡಿದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics