ನವದೆಹಲಿ: ಹಿಂದೂ ತಾಲಿಬಾನಿಗಳು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದರು ಎಂದು ಸುಪ್ರೀಂ ಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.
ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಶೋಖ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ನೇತೃತ್ವದ ತ್ರಿಸದಸ್ಯ ಪೀಠ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂಘಪರಿವಾರದ ಸದಸ್ಯರ ವಿರುದ್ಧ ಕಿಡಿಕಾರಿತು.
ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಬುದ್ಧನ ವಿಗ್ರಹವನ್ನು ಧ್ವಂಸಗೊಳಿಸಿದಂತೆಯೇ ಇಲ್ಲಿ ಬಾಬ್ರಿ ಮಸೀದಿಯನ್ನು ಹಿಂದೂ ತಾಲಿಬಾನಿಗಳು ಧ್ವಂಸಗೊಳಿಸಿದರು. ಯಾವುದೇ ಧರ್ಮ, ಸಂವಿಧಾನ ಮತ್ತುಸಂಸ್ಕೃತಿ ಮಸೀದಿ, ದೇಗುಲಗಳಂತಹ ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವಂತೆ ಹೇಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಶಿಯಾ ವಕ್ಫ್ ಸಮಿತಿ ವಿವಾದ ಸ್ಥಳದ ಮೂರನೇ ಒಂದು ಭಾಗವನ್ನು ನೀಡಲು ಸಿದ್ಧವಿರುವ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಇಂತಹ ಹೇಳಿಕೆ ನೀಡಿದೆ.