ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ಒಂದು ರಾಷ್ಟ್ರ, ಒಂದು ಚುನಾವಣೆ' ರಜನಿಕಾಂತ್ ಬೆಂಬಲ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸುಗಳಲ್ಲೊಂದಾದ ಒಂದು ರಾಷ್ಟ್ರ ಒಂದು ಚುನಾವಣೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ...

ರಜನಿಕಾಂತ್
Manjula VN
Updated On : 15 Jul 2018, 1:29 am
ಚೆನ್ನೈ; ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸುಗಳಲ್ಲೊಂದಾದ ಒಂದು ರಾಷ್ಟ್ರ ಒಂದು ಚುನಾವಣೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ. ಅವರು, ಒಂದು ರಾಷ್ಟ್ರ, ಒಂದು ಚುನಾವಣೆಗೆ ನಾನು ಬೆಂಬಲ ವ್ಯಕ್ತಪಡಿಸುತ್ತೇನೆ. ಏಕಾಲಕ್ಕೆ ಚುನಾವಣೆ ನಡೆಸುವುದು ಉತ್ತಮವಾದ ಕಲ್ಪನೆಯಾಗಿದ್ದು, ಇದು ರಾಜಕೀಯ ಪಕ್ಷಗಳ ಹಣ ಹಾಗೂ ಸಮಯವನ್ನು ಉಳಿತಾಯ ಮಾಡುತ್ತದೆ ಎಂದು ಹೇಳಿದ್ದಾರೆ. 
ಬಳಿಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧೆ ನಡೆಸುವುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಚುನಾವಣೆಗೆ ಸ್ಪರ್ಧೆಗಿಳಿಯುವ ಕುರಿತಂತೆ ಚರ್ಚೆ ನಡೆಸಿ, ನಂತರದ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

Advertisement

Advertisement

ಇದೇ ವೇಳೆ ತಮಿಳುನಾಡು ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅದು ಅಮಿತ್ ಶಾ ಅವರ ಪ್ರತಿಕ್ರಿಯೆಯಾಗಿದೆ. ಮಾಧ್ಯಮಗಳು ಶಾ ಅವರ ಬಳಿಯೇ ಹೋಗಿ ಪ್ರತಿಕ್ರಿಯೆ ಕೇಳಲಿ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments