ಸಾಂದರ್ಭಿಕ ಚಿತ್ರ 
ದೇಶ

ಖಾಸಗಿ ಶಸ್ತ್ರಾಸ್ತ್ರ ಪರವಾನಗಿ ಹಿಂಪಡೆಯಲು ಜಮ್ಮು-ಕಾಶ್ಮೀರ ಸರ್ಕಾರ ನಿರ್ಧಾರ

ಖಾಸಗಿ ಶಸ್ತ್ರಾಸ್ತ್ರ ಪರವಾನಗಿ ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಶ್ರೀನಗರ; ಖಾಸಗಿ ಶಸ್ತ್ರಾಸ್ತ್ರ ಪರವಾನಗಿ ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ. 
ಶಸ್ತ್ರಾಸ್ತ್ರ ಮಸೂದೆ 2016ರ ಅಡಿಯಲ್ಲಿ ಜನವರಿ, 1 2017ರಿಂದ ಫೆಬ್ರವರಿ 23,2018ರ ಅವಧಿಯಲ್ಲಿ ನೀಡಲಾಗಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದ್ದು, ಮುಂದಿನ ಆದೇಶದವರೆಗೂ ಹೊಸದಾಗಿ ನೀಡಲಾಗುತ್ತಿರುವ ಪರವಾನಗಿಗಳನ್ನೂ ಕೂಡ ನಿಷೇಧ ಮಾಡುವ ಕುರಿತಂತೆ ಚರ್ಚೆಗಳನ್ನು ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಈ ಕುರಿತಂತೆ ಆದೇಶ ಹೊರಡಿಸಿರುವ ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಖಾಸಗಿಯಾಗಿ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡಲು ಹೊಸದಾಗಿ ಪರವಾನಗಿ ನೀಡದಂತೆ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. 
ಈ ಸಂಬಂಧ ತನಿಖೆ ನಡೆಸುವ ಹಾಗೂ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಸ್ಟೇಟ್ ವಿಜಿಲ್ಯಾನ್ಸ್ ಆರ್ಗನೈಸೇಷನ್ (ಎಸ್'ವಿಒ)ಗೆ ಅಧಿಕಾರ ನೀಡಲಾಗಿದೆ. 1 ತಿಂಗಳೊಳಗೆ ವಿಭಾಗೀಯ ಆಯುಕ್ತರೂ ಸಹ ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆಯೂ ಇಲಾಖೆ ಆದೇಶಿಸಿದೆ. ಜಿಲ್ಲಾಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಎಚ್ಚರಿಗೆ ನೀಡಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT