ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಪ್ವಾರದ ಸಫವಾಲಿ ಗಾಲ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎನ್ ಕೌಂಟರ್ ನಡೆಸಲಾಗಿದ್ದು, ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಹತ್ಯೆಯಾದ ಉಗ್ರನಿಂದ 1 ಎಕೆ-47 ರೈಫಲ್'ನ್ನು ವಶಕ್ಕೆ ಪಡೆದುಕೊಂಡಿದೆ.