ದೇಶ

ನೊಯ್ಡಾ ಅವಳಿ ಕಟ್ಟಡ ಕುಸಿತ ಪ್ರಕರಣ; ಕಟ್ಟಡದ ಮಾಲೀಕ, ಮಧ್ಯವರ್ತಿ ಸೇರಿ 3 ಬಂಧನ

Manjula VN
ಗ್ರೇಟರ್ ನೊಯ್ಡಾ: ನೋಯ್ಡಾ ಅವಳಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ, ಮಧ್ಯವರ್ತಿ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
6 ಹಂತದ ಕಟ್ಟಡವೊಂದು ಪಕ್ಕದಲ್ಲಿದ್ದ ಮತ್ತೊಂದು ಕಟ್ಟಡದ ಮೇಲೆ ಕುಸಿದುಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೊಂಡಿದ್ದಾರೆ. 
ಕಟ್ಟಡ ನಿರ್ಮಾಣದ ವೇಳೆ ಮಾಲೀಕರು ಭದ್ರತಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಕೆ ಮಾಡಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 
ಕಟ್ಟಡ ನಿರ್ಮಾಣಕ್ಕೂ ಮುನ್ನವೇ ಮನೆಗಳನ್ನು ಮಾರಾಟ ಮಾಡಲಾಗಿದ್ದು, ಮನೆಗಳ ಖರೀದಿದಾರರು, ಸ್ಥಳೀಯರು ಇದೀಗ ನಿರ್ಮಾಣಕಾರರ ವಿರುದ್ಧ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ. 
ಘಟನೆಗೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಇದೀಗ ಕಟ್ಟಡದ ಮಾಲೀಕ ಗಂಗಾ ಶರಣ್ ದ್ವಿವೇದಿ ಹಾಗೂ ಮಧ್ಯವರ್ತಿ ಖ್ವಾಸಿಮ್ ಸೇರಿ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆ. 
ಕಟ್ಟಡದ ಅಡಿಯಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಯಾಗಲಿದೆ ಎಂದು ಹೇಳಲಾಗುತ್ತಿದೆ. 
SCROLL FOR NEXT