ನವದೆಹಲಿ; ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ವಿರೋಧ ಪಕ್ಷಗಳ ಮಂಡನೆ ಮಾಡಿದ್ದ ಅವಿಶ್ವಾಸ ನಿರ್ಣಯ ಕುರಿತು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬುಧವಾರ ತಿಳಿದುಬಂದಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.
ಈ ಅವಿಶ್ವಾಸ ನಿರ್ಣಯ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆಗೆ ಅವಕಾಶ ನೀಡಿದ್ದಾರೆಂದು ತಿಳಿದುಬಂದಿದೆ.