ಚೆನ್ನೈ: ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಎಂ ಕರಣಾನಿಧಿ ಬುಧುವಾರ ಚೆನ್ನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ಅಳವಡಿಸಿದ್ದ ಶ್ವಾಸನಾಳ ಬದಲಾವಣೆಗಾಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ಕಾವೇರಿ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ವಾಶನಾಳ ಅಳವಡಿಕೆ ಕೆಲಸ ಮುಗಿದ ನಂತರ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು, 95 ವರ್ಷದ ಕರುಣಾನಿಧಿ ಕಳೆದ ವರ್ಷ ಆಗಸ್ಟ್ ನಲ್ಲಿ ಎಂಡೋಸ್ಕೋಪಿಗೆ ಒಳಗಾಗಿದ್ದರು.