ಗುಜರಾತ್; ಭೀಕರ ಅಪಘಾತ; ಒಂದೇ ಕುಟುಂಬದ 8 ಮಂದಿ ದುರ್ಮರಣ
ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ರಾಜ್'ಕೋಟ್-ಮೊರಾಬಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ...
ಗುಜರಾತ್ (ಗಾಂಧಿನಗರ): ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ರಾಜ್'ಕೋಟ್-ಮೊರಾಬಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಮೊಬ್ರಿ ಜಿಲ್ಲೆಯ ಟಂಕಾರಾ ಟೌನ್ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಮತ್ತು ಕಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಸ್ಥಳದಲ್ಲಿಯೇ 8 ಮಂದಿ ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆಂದು ವರದಿಗಳು ತಿಳಿಸಿವೆ.
ಮೃತಪಟ್ಟ ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಎಂದು ಪೊಲೀಸ್ ಆಯುಕ್ತ ಕರಣ್'ರಾಜ್ ವೆಘೇಲಾ ಅವರು ತಿಳಿಸಿದ್ದಾರೆ.