ಪಿ. ಚಿದಂಬರಂ ಹಾಗೂ ಕಾರ್ತಿ ಚಿದಂಬರಂ 
ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ. ಚಿದಂಬರಂ, ಮಗ ಕಾರ್ತಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ದಾಖಲು

ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿ ಚಿಬಿಐ ರಚಿಸಿರುವ ಚಾರ್ಜ್ ಶೀಟ್ ನಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ಹೆಸರನ್ನು ಸೇರಿಸಲಾಗಿದೆ.

ನವದೆಹಲಿ: ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿ ಚಿಬಿಐ ರಚಿಸಿರುವ ಚಾರ್ಜ್ ಶೀಟ್ ನಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ  ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ಹೆಸರನ್ನು ಸೇರಿಸಲಾಗಿದೆ.
ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರ ಮುಂದೆ ಸಿಬಿಐ ತನ್ನ ಪೂರಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ನ್ಯಾಯಾಲಯ ಇದನ್ನು  ಜುಲೈ 31 ರಂದು ಪರಿಗಣಿಸಲು ತೀರ್ಮಾನಿಸಿದೆ.
2006ರಲ್ಲಿ  ಹಣಕಾಸು ಸಚಿವರಾಗಿದ್ದ ಚಿದಂಬರಂ ವಿದೇಶಿ ಹೂಡಿಕೆ ಪ್ರೋತ್ಸಾಹ ಮಂಡಳಿ (ಎಫ್ಐಪಿಬಿ) ಅನುಮೋದನೆ ಮೂಲಕ ಹೇಗೆ ಆರ್ಥಿಕ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎನ್ನುವ ಕುರಿತಂತೆ ಸಿಬಿಐ ತನಿಖೆ ನಡೆಸುತ್ತಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ 3,500 ಕೋಟಿ ರೂ.ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ನನ್ನ ವಿರುದ್ಧ ಆರೋಪ ಪಟ್ಟಿ ದಾಖಲಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐಅ) ಮೇಲೆ ಒತ್ತಡವಿದೆ. ಹೀಗಾಗಿ ಅಧಿಕಾರಿಗಳು ಇದನ್ನೇ ಮಾಡಿದ್ದಾರೆ.. ಈ ಪ್ರಕರಣವು ಈಗ ಗೌರವಯುತ ನ್ಯಾಯಾಲಯದಲ್ಲಿದೆ.ನಾನು ಇದರ ಕುರಿತಂತೆ ಹೋರಾಟ ನಡೆಸಲಿದ್ದೇನೆ. ಇಷ್ಟಲ್ಲದೆ ನಾನೀಗ ಈ ಕುರಿತಂತೆ ಯಾವ ಸಾರ್ವಜನಿಕ ಹೇಳಿಕೆಗಳನ್ನು ನೀಡಬಯಸುವುದಿಲ್ಲ ಎಂದು ಮಾಜಿ ಸಚಿವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT