ಸಂಗ್ರಹ ಚಿತ್ರ 
ದೇಶ

ರಾಜ್ಯಸಭೆ: 10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಬುಧವಾರ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು, ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದ ಘೋಷಣೆ ಮಾಡುವಾಗ ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತನಾಡಿದ್ದು, ಇದು ಹೊಸ ದಾಖಲೆಯಾಗಿ ಮಾರ್ಪಟ್ಟಿದೆ.
ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆ ಕಲಾಪದಲ್ಲಿ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ಪ್ರಕಟಿಸಿರು. ಆದರೆ ಸದಸ್ಯರು ಮಾತನಾಡುವಾಗ ಸಚಿವಾಲಯದ ಗಮನಕ್ಕೆ ತರಬೇಕಾಗುತ್ತದೆ ಎಂದೂ ನಾಯ್ಡು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಈ ಮೊದಲು ರಾಜ್ಯಸಭೆಯಲ್ಲಿ ಅಸ್ಸಾಮೀ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ,  ಒರಿಯಾ, ಪಂಜಾಬಿ, ತಮಿಳು , ತೆಲುಗು , ಉರ್ದು ಸೇರಿದಂತೆ 17 ಭಾಷೆಗಳಲ್ಲಿ ಮಾತನಾಡುವ ಅವಕಾಶ ಇತ್ತು.  ಇದೀಗ ಹೆಚ್ಚುವರಿಯಾಗಿ  ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel