ದೇಶ

ಅವಿಶ್ವಾಸ ನಿರ್ಣಯ ಕುರಿತು ಶೀಘ್ರದಲ್ಲಿಯೇ ಠಾಕ್ರೆ ಅಂತಿಮ ನಿರ್ಧಾರ; ಸಂಜಯ್ ರಾವತ್

Manjula VN
ನವದೆಹಲಿ: ಸಂಸತ್ತಿನಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಶೀಘ್ರದಲ್ಲಿಯೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಗುರವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಆಡಳಿತಾರೂಢ ಪಕ್ಷದ ವಿರುದ್ಧ ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ಇದೀಗ ಎಲ್ಲರೂ ಶಿವಸೇನೆ ನಿರ್ಧಾರ ಏನಾಗಬಹುದು ಎಂದು ಎದುರು ನೋಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ಮುಖ್ಯಸ್ಥರು ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 
ಕಳೆದ ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹತ್ತಿರದಿಂದ ನೋಡಿದರೆ, ದೇಶದಲ್ಲಿರುವ ಸಾಕಷ್ಟು ರೈತರು ಇಂದಿಗೂ ಸಂಕಷ್ಟದಲ್ಲಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿ ಮಾಡಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳು ದನಿ ಎತ್ತುವ ವಿಷಯಗಳ ಬಗ್ಗೆ ಮೋದಿ ಸರ್ಕಾರ ಚರ್ಚೆ ನಡೆಸಬೇಕು ಎಂದು ತಿಳಿಸಿದ್ದಾರೆ. 
SCROLL FOR NEXT