ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿ 
ದೇಶ

ಅವಿಶ್ವಾಸ ನಿರ್ಣಯ ಮಂಡಿಸಿದ್ದು ಟಿಡಿಪಿ, ನಾವಲ್ಲ; ತಮಿಳುನಾಡು ಸಿಎಂ ಪಳನಿಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಆಂಧ್ರಪ್ರದೇಶದ ತೆಲುಗು ದೇಶಂ (ಟಿಡಿಪಿ) ಪಕ್ಷವೇ ಹೊರತು ನಾವಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿಯವರು...

ಚೆನ್ನೈ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಆಂಧ್ರಪ್ರದೇಶದ ತೆಲುಗು ದೇಶಂ (ಟಿಡಿಪಿ) ಪಕ್ಷವೇ ಹೊರತು ನಾವಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿಯವರು ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದು ನಾವಲ್ಲ, ಆಂಧ್ರಪ್ರದೇಶ. ಕಾವೇರಿ ನಿರ್ವಹಣಾ ಮಂಡಳಿ ಕುರಿತಂತೆ ಸಂಸತ್ತಿನಲ್ಲಿ ಕಳೆದ 22 ದಿನಗಳಿಂದ ಹೋರಾಡುತ್ತಲೇ ಇದ್ದೇವೆ. ಕಾವೇರಿ ವಿಚಾರ ನಮ್ಮ ವಿಷಯವಾಗಿದ್ದು, ಅವಿಶ್ವಾಸ ನಿರ್ಣಯ ಮಂಡನೆಯಲ್ಲ ಎಂದು ಹೇಳಿದ್ದಾರೆ. 
ಕಾವೇರಿ ವಿಚಾರವಾಗಿ ನಾವು ಹೋರಾಟ ಮಾಡುತ್ತಲೇ ಇದ್ದೇವೆ. ನಮ್ಮೊಂದಿಗೆ ಯಾರು ಕೈಜೋಡಿಸಿದರು? ನಮ್ಮ ಸಹಾಯಕ್ಕೆ ಯಾವ ರಾಜ್ಯ ಬಂದಿತು? ಅವಿಶ್ವಾಸ ಮಂಡನೆ ಮಾಡಿದ್ದು ಟಿಡಿಪಿ ಪಕ್ಷ. ಪ್ರತೀ ಪಕ್ಷಕ್ಕೂ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಹಕ್ಕಿದೆ. ಅದನ್ನೇ ಟಿಡಿಪಿ ಮಾಡಿದೆ ಎಂದು ತಿಳಿಸಿದ್ದಾರೆ. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ನಿನ್ನೆಯಷ್ಟೇ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದರು. ಅಲ್ಲದೆ, ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆಯನ್ನು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ನಡೆಸುವುದಾಗಿ ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel