ಮಹಾರಾಷ್ಟ್ರ : ಬೈಕುಲಾ ಜೈಲಿನ 70 ಖೈದಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮುಂಬೈನ ಬೈಕುಲಾ ಜೈಲಿನ 70 ಖೈದಿಗಳು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರ: ಮುಂಬೈನ ಬೈಕುಲಾ ಜೈಲಿನ 70 ಖೈದಿಗಳು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖೈದಿಗಳಿಗೆ ವಾಂತಿ ಬೇಧಿ, ಹಾಗೂ ಉದರ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಮುಂದುವರೆಸುತ್ತಿರುವುದಾಗಿ ಆಸ್ಪತ್ರೆಯ ಸೂಪರಿಟೆಂಡೆಂಟ್ ಡಾ. ಸಂಜಯ್ ಸುರಾಸೆ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಅಸ್ವಸ್ಥಗೊಂಡಿರುವ ಖೈದಿಗಳನ್ನು 48 ಗಂಟೆಗಳ ಕಾಲ ಪರಿವೀಕ್ಷಣೆಗೆ ಇಡಲಾಗಿದೆ ಎಂದು ಡಾ. ವಿಕ್ವಾರ್ ಶೆಯ್ ಕು ಮಾಹಿತಿ ನೀಡಿದ್ದಾರೆ.
ಖೈದಿಗಳು ಅಸ್ವಸ್ಥಗೊಂಡಿರುವುದು ಏಕೆ ಎಂಬುದು ಪೂರ್ಣ ವರದಿ ಬಂದ ಬಳಿಕವೇ ತಿಳಿದುಬರಲಿದೆ ಎಂದು ಅವರು ತಿಳಿಸಿದ್ದಾರೆ.
ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಮತ್ತಿತರ ಹೈ ಪ್ರೋಫೈಲ್ ಆರೋಪಿಗಳು ಇದೇ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.