ದೇಶ

ರವಾಂಡ, ಉಗಾಂಡಾ, ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಭೇಟಿ

Lingaraj Badiger
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23ರಿಂದ ಜುಲೈ 27ರ ವರೆಗೆ ರವಾಂಡ, ಉಗಾಂಡಾ ಮತ್ತು ದಕ್ಷಿಣ ಆಫ್ರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.
ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಝಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದು, ಮೊದಲು ಎರಡು ದಿನ ರವಾಂಡಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ತಿರುಮೂರ್ತಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿಗಳು ಜುಲೈ 24 ಮತ್ತು 25ರಂದು ಉಗಾಂಡಾಗೆ ಭೇಟಿ ನೀಡಲಿದ್ದು, ಉಗಾಂಡಾದ ಸಂಸತ್ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿರುಮೂರ್ತಿ ಅವರು ತಿಳಿಸಿದ್ದಾರೆ.
SCROLL FOR NEXT