ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ನಾಚಿಕೆಗೇಡಿನದು ಎಂದು ಬಿಜೆಪಿಯ ಸಂಸದ ರಾಕೇಶ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತು ಒಂದು ಕುಟುಂಬದಂತೆ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ದೋಷಪೂರಿತ ಆಡಳಿತವನ್ನು ನೀಡಿತ್ತು. ಮಹಿಳೆಯರ ಬಗ್ಗೆ ಗಮನ ನೀಡಿರಲಿಲ್ಲ. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತರ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮನೋಹನ್ ಸಿಂಗ್ ಹೇಳಿದ್ದರು. ಆದಾಗ್ಯೂ, ಪ್ರಧಾನಿ ನರೇಂದ್ರಮೋದಿ, ದೇಶದ ಸಂಪನ್ಮೂಲಗಳ ಮೇಲೆ ಬಡವರ ಮೊದಲ ಹಕ್ಕಿದೆ ಎಂದು ಹೇಳುವ ಮೂಲಕ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.