ಸಂಗ್ರಹ ಚಿತ್ರ 
ದೇಶ

ರಾಜಸ್ಥಾನದಲ್ಲಿ ಮತ್ತೆ ಗೋ ಸಂರಕ್ಷಕರ ಸೋಗಿನಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಸಾವು!

ಸಾಮೂಹಿಕ ಹಲ್ಲೆಗೆ ಸುಪ್ರೀಂ ಕೋರ್ಟ್ ವಿರೋಧ ವ್ಯಕ್ತಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಸಾಮೂಹಿಕ ಹಲ್ಲೆಯಿಂದಾಗಿ ಸಾವು ಸಂಭವಿಸಿದೆ.

ಜೈಪುರ: ಸಾಮೂಹಿಕ ಹಲ್ಲೆಗೆ ಸುಪ್ರೀಂ ಕೋರ್ಟ್ ವಿರೋಧ ವ್ಯಕ್ತಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಸಾಮೂಹಿಕ ಹಲ್ಲೆಯಿಂದಾಗಿ ಸಾವು ಸಂಭವಿಸಿದೆ.
ರಾಜಸ್ಥಾನದ ಆಳ್ವಾರ್ ಜಿಲ್ಲೆಯ ರಾಮಘಡ್ ನಲ್ಲಿ ಗೋ ಸಂರಕ್ಷಕರ ಸೋಗಿನಲ್ಲಿ ಕೆಲ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಹಲ್ಲೆ ಸಾಮೂಹಿಕ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕೊಲೆಗೀಡಾದ ವ್ಯಕ್ತಿಯನ್ನು ಅಕ್ಬರ್ ಎಂದು ಗುರುತಿಸಲಾಗಿದ್ದು. ನಿನ್ನೆ ಆಳ್ವಾರ್ ನಲ್ಲಿ ಈತ ಗೋವುಗಳನ್ನು ಅಕ್ರಮ ಸಾಗಣೆ ಮಾಡುತ್ತಿದ್ದ ಎಂದು ಆರೋಪಿಸಿ ಗೋಸಂರಕ್ಷಕರು ಎಂದು ಹೇಳಿಕೊಂಡ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಆಳ್ವಾರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ದೇಶದಲ್ಲಿ ನಡೆಯುತ್ತಿರುವ ಗೋ ಸಂರಕ್ಷಕರ ಸೋಗಿನ ದುಷ್ಕರ್ಮಿಗಳು ಮತ್ತು ಮಕ್ಕಳ ಕಳ್ಳರು ಎಂದು ಶಂಕಿಸಿ ನಡೆಸಲಾಗುತ್ತಿದ್ದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆ ಸರ್ಕಾರದ ಹೊಣೆಯಾಗಿದ್ದು, ಸಾಮೂಹಿಕ ಹಲ್ಲೆ ತಡೆಯಲು ಕಾನೂನು ರಚಿಸಿ ಎಂದು ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!