ದೇಶ

ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲೂ ಟಿಎಂಸಿ ಗೆಲುವು: ಮಮತಾ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ...

ಕೋಲ್ಕತಾ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಎಲ್ಲಾ 42 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಹೇಳಿದ್ದಾರೆ.
ಟಿಎಂಸಿ ಹುತಾತ್ಮರ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ತಮ್ಮ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುವ ಮೂಲಕ ದೇಶ ರಕ್ಷಿಸಲಿದೆ ಎಂದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಖ್ಯಾಬಲ ತೀವ್ರವಾಗಿ ಕುಸಿಯಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜ್ಯದಲ್ಲಿ ನಾವು ಎಲ್ಲಾ 42 ಸ್ಥಾನ ಗೆಲ್ಲುತ್ತೇವೆ. ಇದು ನಮ್ಮ ಪ್ರತಿಜ್ಞೆ. ದೇಶ ಉಳಿಸಲು ನಾವು ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುತ್ತೇವೆ. ಈ ಸಂಬಂಧ ಜನವರಿಯಲ್ಲಿ ದೊಡ್ಡ ರ್ಯಾಲಿ ಆಯೋಜಿಸಿ, ಎಲ್ಲಾ ಪ್ರತಿಪಕ್ಷ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಟಿಎಂಸಿ ಸದ್ಯ ಲೋಕಸಭೆಯಲ್ಲಿ 34 ಸಂಸದರನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT