ಮಮತಾ ಬ್ಯಾನರ್ಜಿ 
ದೇಶ

ಆಗಸ್ಟ್ 15 ರಿಂದ ಬಿಜೆಪಿ ಹಠಾವೊ, ದೇಶ ಬಚಾವೋ ಆಂದೋಲನ ಪ್ರಾರಂಭ- ಮಮತಾ

2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋಲ್ಕತ್ತಾ: 2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ  ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ  ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಹುತಾತ್ಮ ದಿನದ ಅಂಗವಾಗಿ ಆಯೋಜಿಸಿದ್ದ  ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಎಲ್ಲಾ ಕಡೆ ಗುಂಪು ಹಲ್ಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ತಾಲಿಬಾನ್ ಭೀತಿ ಸೃಷ್ಟಿಸಲಾಗುತ್ತಿದೆ. ಬಿಜೆಪಿ , ಆರ್ ಎಸ್ ಎಸ್ ನಲ್ಲಿ ಕೆಲವರು ಒಳ್ಳೆವರಿದ್ದು, ಅವರಿಗೆ ಗೌರವ ನೀಡುತ್ತೇನೆ. ಆದರೆ. ಮತ್ತೆ ಕೆಲವರು ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದಲ್ಲಿ ಎಡರಂಗದ ಸರ್ಕಾರದ ವೇಳೆಯಲ್ಲಿ 1993ರಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ 13  ಯುವ ಕಾಂಗ್ರೆಸ್ ಕಾರ್ಯಕರ್ತರ ಸ್ಮರಣೆ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜುಲೈ 21 ರಂದು ತೃಣಮೂಲ ಕಾಂಗ್ರೆಸ್ ವತಿಯಿಂದ ಹುತಾತ್ಮರ ದಿನ ಆಚರಿಸಲಾಗುತ್ತದೆ. ಆ ವೇಳೆಯಲ್ಲಿ ಮಮತಾ ಬ್ಯಾನರ್ಜಿ ಯುವ ಕಾಂಗ್ರೆಸ್ ನಾಯಕರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT