ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ಗೆ ಇದೀಗ ಮತದಾರರ ವಿಶ್ವಾಸ ಗಳಿಸುವ ಸವಾಲು ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮತ್ತು ಚುನಾವಣ ನಂತರದ ಮೈತ್ರಿಗೆ ಮುಂದಾಗುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗಿಯಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ನಿರ್ಧಾರ ಕೈಗೊಂಡಿದೆ.
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಸಿಡಬ್ಲ್ಯೂಸಿ ಸಭೆ ನಡೆಸಿದ್ದು ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಿತ್ರಪಕ್ಷಗಳ ಜತೆ ಚುನಾವಣಾ ಪೂರ್ವ ಮತ್ತು ಚುನಾವಣ ನಂತರದ ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ.
ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ. ಪ್ರತಿ ಕ್ಷೇತ್ರದಲ್ಲೂ ನಮ್ಮ ವಿರುದ್ಧ ಮತ ಚಲಾಯಿಸುವ ಮತದಾರರ ನಂಬಿಕೆಗಳನ್ನು ಗೆಲುವುದು ಅಗತ್ಯ ಈ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics