ಬಿಜೆಪಿಯಿಂದ ತುಳಿತಕ್ಕೊಳಗಾದವರ ಪರ ಹೋರಾಡಲು ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ
ಭಾರತೀಯ ಜನತಾ ಪಕ್ಷದಿಂದ ತುಳಿತಕ್ಕೊಳಗಾದ ದಲಿತರು ಹಾಗೂ ಬಡವರ ಪರ ಹೋರಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ....
ನವದೆಹಲಿ: ಭಾರತೀಯ ಜನತಾ ಪಕ್ಷದಿಂದ ತುಳಿತಕ್ಕೊಳಗಾದ ದಲಿತರು ಹಾಗೂ ಬಡವರ ಪರ ಹೋರಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ರಾಹುಲ್ ಕಾಂಗ್ರೆಸ್ 'ಭಾರತದ ಧ್ವನಿ' (ವಾಯ್ಸ್ ಆಫ್ ಇಂಡಿಯಾ) ದೇಶದ ವರ್ತಮಾನ ಹಾಗೂ ಭವಿಷ್ಯದ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅನುಭವ ಮತ್ತು ಸಾಮರ್ಥ್ಯವುಳ್ಳವರ ಒಂದು ಸಂಸ್ಥೆಯಾಗಿದ್ದು, ಭೂತ ಮತ್ತು ಭವಿಷ್ಯದ ನಡುವಿನ ಸೇತುವೆಯಾಗಿದೆ ಎಂದು ತಿಳಿಸಿದ್ದಾರೆ,
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿದ್ದು, ಚುನಾವಣಾ ತಯಾರಿ ಸಂಬಂಧ ಇಂದು ಮೊದಲ ಸಭೆ ನಡೆಸಿದರು. ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದವರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.