ದೇಶ

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆರಂಭ: ಲೋಕಸಭೆ ಚುನಾವಣೆ ಮುಖ್ಯ ಅಜೆಂಡಾ

Shilpa D
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನೂತನವಾಗಿ ರಚಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ಆರಂಭವಾಗಿದೆ.
ಸಂಸತ್ತಿನ ಅನೆಕ್ಸ್ ಬಿಲ್ಡಿಂಗ್​ನಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಮಧ್ಯ ಪ್ರದೇಶ, ರಾಜಸ್ತಾನ,ಮತ್ತು ಛತ್ತೀಸ್ ಗಡ ವಿಧಾನಸಭೆ ಚುನಾವಣೆ ಮತ್ತು 2019ರ ಲೋಕಸಭೆ ಚುನಾವೆಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. 
ಕಳೆದ ವಾರ ರಾಹುಲ್ ಗಾಂಧಿ ಕಾರ್ಯಕಾರಿ ಸಮಿತಿ ರಚಿಸಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಿರಿಯ ಕಾಂಗ್ರೆಸ್ ಮುಖಂಡರಾದ  ಗುಲಾಂ ನಬಿ ಆಜಾದ್,  ಮೊತಿಲಾಲ್ ವೊರಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.
SCROLL FOR NEXT