ದೇಶ

ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

Shilpa D
ನವದೆಹಲಿ: ಸಾಮಾಜಿಕ ಮಾಧ್ಯಮಗಳ ಮೇಲೆ ಹತೋಟಿಯಿಡುವ ಯಾವುದೇ ರೀತಿಯ ಪ್ರಸ್ತಾವನೆಯಿಲ್ಲ ಎಂದು ರಾಜ್ಯಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಮಾಹಿತಿ, ತಂತ್ರಜ್ಞಾನ  ಮತ್ತು ಪ್ರಸಾರ ಖಾತೆ ಸಚಿವ ರಾಜವರ್ಧನ್  ರಾಥೋರ್, ತಮ್ಮ ಇಲಾಖೆಯಿಂದ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರ ಹೇರುವ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಟ್ವಿಟ್ಟರ್, ಇನ್ ಸ್ಟಾ ಗ್ರಾಂ, ಯೂ ಟ್ಯೂಬ್ ಮೂಲಕ, ಇಲಾಖೆಯ  ನೀತಿ. ನಿಯಮಗಳು ಕಾರ್ಯಕ್ರಮಗಳನ್ನು ತಿಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಂದ ಸಮಾಜಕ್ಕೆ ಗಂಭೀರ ಬೆದರಿಕೆಯಿದೆ, ಹೀಗಾಗಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಬೇಕು ಎಂಬ ಪ್ರಸ್ತಾವನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ವ್ಯಕ್ತಿಯ ಗೌಪ್ಯತೆಯ ಹಕ್ಕನ್ನು ಹಾಳು ಮಾಡುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
SCROLL FOR NEXT