ಮಾಯಾವತಿ 
ದೇಶ

ಅಗತ್ಯ ಸಂಖ್ಯೆಯ ಸೀಟು ನೀಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ: ಮಾಯಾವತಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿಗೆ ಗೌರವಾನ್ವಿತ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ...

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿಗೆ ಗೌರವಾನ್ವಿತ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಎಸ್ ಪಿ ಸರ್ವೋಚ್ಚ ನಾಯಕಿ  ಮಾಯಾವತಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಯಾವತಿ, ಮಧ್ಯಪ್ರದೇಶ, ಛತ್ತೀಸ್ ಗಡ ಮತ್ತು ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ತಮಗೆ ಅಗತ್ಯ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಬೇಕು, ಹಾಗಿದ್ದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯ ಎಂದು ಷರತ್ತು ವಿಧಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಸ್ ಪಿ ಜೊತೆ ಬಿಎಸ್ ಪಿ ಕೈ ಜೋಡಿಸಿತ್ತು ಎಂದು ಮಾಯಾವತಿ ಹೇಳಿದ್ದಾರೆ.
ಇನ್ನೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ ಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರ ಸಂಬಂಧ ಕಿಡಿ ಕಾರಿದ್ದಾರೆ, ಬಿಜೆಪಿ ಸದಸ್ಯರು ಹಾಗೂ ಬೆಂಬಲಿಗರಿಂದ ಇಂಥ ಕೃತ್ಯ ನಡೆದಿದೆ, ನಾನು ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಮುಗ್ದ ಜನರು ಬಲಿಯಾಗುತ್ತಿದ್ದಾರೆ, ಕೊಲೆ ಮಡಲು ಸರ್ಕಾರ ಸ್ವಾತಂತ್ಯ್ರ ನೀಡಿದೆ, ಇದರಿಂದ ಪ್ರಜಾಪ್ರಭುತ್ವಕ್ಕೆ ಹಾನಿಯಾಗುತ್ತಿದ್ದು,  ದೇಶದ ಜನ ಭಯದಲ್ಲಿ ಬದುಕುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT