ಬಿಜೆಪಿ ಹಾಗೂ ಶಿವಸೇನೆ ನಡುವಿನ ಮುಸುಕಿನ ಗುದ್ದಾಟ ಇದೀಗ ಜಗಜ್ಜಾಹೀರಾಗಿದ್ದು 2014ರಲ್ಲಿ ಶಿವಸೇನೆ ಬಿಜೆಪಿಯನ್ನು ಬೆಂಬಲಿಸಿರಲ್ಲಿಲ್ಲ. ಬದಲಿಗೆ ಬಿಜೆಪಿ ಪಕ್ಷ ಕಾಂಗ್ರೆಸ್ ಹಾಗೂ ಎನ್‌ಸಿಪಿ ಒಗ್ಗಟ್ಟು ಮುರಿಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಿತು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನೆಯ ಸಾಮ್ನಾ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಉದ್ಧವ್ ಠಾಕ್ರೆ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಮತ ನೀಡಿ ತಪ್ಪು ಮಾಡಲಿಲ್ಲ. ಆದರೆ ವಂಚಿಸಿದರು ಎಂದು ಆರೋಪಿಸಿದರು.
ಯುಪಿಎ ಸರ್ಕಾರ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಮಾಡಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಆರೋಪಗಳನ್ನು ಸಾಬೀತುಪಡಿಸಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದರು.
ಬಿಜೆಪಿ ಪಕ್ಷ ತ್ರಿಪುರದಲ್ಲಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಅನ್ನು ಮುರಿದ ಹಾಗೆ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ನಡುವಿನ ಒಗ್ಗಟನ್ನು ಮುರಿಯುವ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಶಿವಸೇನೆ ಬಿಜೆಪಿ ಸರ್ಕಾರದಲ್ಲಿ ನೇರವಾಗಿ ಭಾಗವಹಿಸಲಿಲ್ಲ. ಮೈತ್ರಿ ಸರ್ಕಾರದಲ್ಲಿ ಆಡಳಿತಾತ್ಮಕ ಕೆಲಸದ ಅನುಭವವನ್ನು ಪಡೆದಿರುವುದಾಗಿ ಹೇಳಿದ್ದಾರೆ.
ಇದು ಸರ್ಕಾರವನ್ನು ನಡೆಸುವ ಒಂದು ಪೂರ್ವಾಭ್ಯಾಸವಾಗಿತ್ತು. ಏನು ಮಾಡಬೇಕು. ಏನು ಮಾಡಬಾರದು. ಅಲ್ಲದೆ, ಯೋಜನೆಗಳನ್ನು ಜಾರಿಗೆ ತರುವುದು ಹೇಗೆ ಎಂಬ ಅನುಭವವನ್ನು ಪಡೆದಿರುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics