ದೇಶ

ಗುಂಪು ಹತ್ಯೆ: ನೋಡಲ್ ಅಧಿಕಾರಿ, ಕಾರ್ಯಪಡೆ ರಚಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Lingaraj Badiger
ನವದೆಹಲಿ: ಗುಂಪು ಹತ್ಯೆ ತಡೆಯುವುದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಪೊಲೀಸ್ ಅಧೀಕ್ಷಕರ ಮಟ್ಟದ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಮತ್ತು ಸಾಮಾಜಿಕ ತಾಣಗಳ ಮೇಲೆ ನಿಗಾ ವಹಿಸಲು ವಿಶೇಷ ಕಾರ್ಯಪಡೆ ರಚಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ಸೂಚಿಸಿದೆ.
ಮಕ್ಕಳ ಕಳ್ಳರು ಅಥವಾ ಜಾನುವಾರ ಕಳ್ಳಸಾಗಾಣಿಕೆದಾರರು ಎಂಬ ಅನುಮಾನದ ಮೇಲೆ ಯಾರ ಮೇಲೂ ದಾಳಿ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಯಾವುದೇ ಗುಂಪು ಹಿಂಸಾಚಾರ ಅಥವಾ ಗುಂಪು ಹತ್ಯೆ ನಡೆದರೆ ಪೊಲೀಸ್ ಅಧಿಕಾರಿ ಅಥವಾ ಜಿಲ್ಲಾ ಆಡಳಿತದ ಅಧಿಕಾರಿ ಕೂಡಲೇ ತನಿಖೆಗೆ ನಿರ್ದೇಶನ ನೀಡಬೇಕು ಮತ್ತು ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಲ್ಲಾ ರಾಜ್ಯ ಹಾಗೂ ಕೇಂದ್ರ ಆಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.
ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಗಳು ಹೆಚ್ಚಿತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ನಿನ್ನೆಯಷ್ಟೆ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ಸಮಿತಿ ಹಾಗೂ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್‌ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
SCROLL FOR NEXT