ಶಬರಿಮಲೆ ದೇವಸ್ಥಾನ 
ದೇಶ

ಹಿಂದೂಗಳನ್ನೇ ಟಾರ್ಗೆಟ್ ಏಕೆ, ಮಸೀದಿಗಳಲ್ಲೂ ಮಹಿಳೆಯರಿಗೆ ನಿಷೇಧವಿದೆ: ಶಬರಿಮಲೆ ಮಂಡಳಿ

ಕೇವಲ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಮಸೀದಿಗಳಲ್ಲೂ ಮಹಿಳೆಯರಿಗೆ ನಿಷೇಧ ಇದೆ ಎಂದು ಕೇರಳದ...

ನವದೆಹಲಿ: ಕೇವಲ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಮಸೀದಿಗಳಲ್ಲೂ ಮಹಿಳೆಯರಿಗೆ ನಿಷೇಧ ಇದೆ ಎಂದು ಕೇರಳದ ಶಬರಿಮಲೆ ದೇವಸ್ಥಾನ ಮಂಡಳಿ ಮಂಗಳವಾರ ಸುಪ್ರೀಂ ಕೋರ್ಟ್ ವಾದಿಸಿದೆ.
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧ ಕುರಿತು ನಾಲ್ಕು ದಿನಗಳಿಂದ ವಿಚಾರಣೆ ನಡೆಯುತ್ತಿದ್ದು, ಸಂಪ್ರದಾಯದ ಒಂದು ಭಾಗವಾಗಿ ಮಹಿಳೆಯರಿಗೆ ನಿಷೇಧಿಸಲಾಗಿದೆಯೇ? ಹೌದು ಎನ್ನುವುದಾದರೆ ಅದು ಧಾರ್ಮಿಕ ನಂಬಿಕೆಯ ಭಾಗ ಎಂದು ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠ ಸೂಚಿಸಿದೆ.
ದೇವಸ್ಥಾನದ ಪರವಾಗಿ ವಾದ ಮಂಡಿಸಿದ ಎಎಂ ಸಿಂಘ್ವಿ ಅವರು, ದೈಹಿಕ ಕಾರಣಗಳಿಂದಾಗಿ ಮಹಿಳೆಯರಿಗೆ ನಿಷೇಧ ಹೇರಲಾಗಿದೆ. ಮಹಿಳೆಯರಿಗೆ ಮುಟ್ಟಿನ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಯ್ಯಪ್ಪನ ಮೇಲೆ ನಂಬಿಕೆ ಇರುವವರು ಇದನ್ನು ಹಲವು ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ಇದು ಅನಾಗರಿಕ ಮತ್ತು ಅಕ್ರಮದ ವಿಚಾರ ಅಲ್ಲ ಎಂದರು.
ತನ್ನ ವಿವಾದಾತ್ಮಕ ನಿಲುವನ್ನು ದೇವಸ್ಥಾನ ಮಂಡಳಿ ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ನ್ಯಾಯಮೂರ್ತಿ ಆರ್ ನಾರಿಮನ್ ಅವರು ಎಎಂ ಸಿಂಘ್ವಿ ಅವರಿಗೆ ಪ್ರಶ್ನಿಸಿದರು.
ಈ ಹಿಂದಿನ ವಿಚಾರಣೆಯಲ್ಲಿ 41 ದಿನಗಳ ಕಾಲ ಇಂದ್ರಿಯಗಳನ್ನು ನಿಗ್ರಹಿಸಬೇಕು ಎಂಬ ಶಬರಿಮಲೆ ದೇವಸ್ಥಾನ ಮಂಡಳಿಯ ಷರತ್ತನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದ ಕೋರ್ಟ್, ಒಮ್ಮೆ ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದರೆ, ಎಲ್ಲರೂ ಪ್ರವೇಶಿಸಬಹುದಾಗಿದೆ. ಹೀಗಾಗಿ ಯಾವ ಆಧಾರದ ಮೇಲೆ ಮಹಿಳೆಯರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!