ದೇಶ

ಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರಣ: ಪೊಲೀಸರ ನಿರ್ಲಕ್ಷ್ಯಕ್ಕೆ ಅಲ್ಪಸಂಖ್ಯಾತ ರಾಷ್ಟ್ರೀಯ ಆಯೋಗ ಖಂಡನೆ

Srinivas Rao BV
ನವದೆಹಲಿ: ರಾಜಸ್ತಾನದ ಆಲ್ವಾರ್ ನಲ್ಲಿ ಗೋವುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣದ ಬಗ್ಗೆ ಅಲ್ಪಸಂಖ್ಯಾತ ರಾಷ್ಟ್ರೀಯ ಆಯೋಗವು ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿದೆ.
ಹಲ್ಲೆಗೊಳಗಾಗಿದ್ದ ಸಂತ್ರಸ್ತ ಮೃತಪಟ್ಟಿದ್ದು ಪೊಲೀಸರ ನಿರ್ಲಕ್ಷ್ಯದಿಂದಲೇ ಎಂದು ಅಲ್ಪಸಂಖ್ಯಾತ ರಾಷ್ಟ್ರೀಯ ಆಯೋಗ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ಈ ಘಟನೆ ಬಗ್ಗೆ ಸಂಪೂರ್ಣ ವರದಿ ಕೇಳಿದೆ.  ರಕ್ಬರ್ ಖಾನ್ ಎಂಬಾತ ಸಾಮೂಹಿಕ ಹಲ್ಲೆ ವೇಳೆ ಮೃತಪಟ್ಟಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವಿಷಯದಲ್ಲಿ ವಿಳಂಬವಾಗಿದೆಯೇ, ಇದರಲ್ಲಿ ಪೊಲೀಸರ ಪಾತ್ರವಿದೆಯೇ ಎಂಬ ಬಗ್ಗೆ ಪ್ರಮುಖವಾಗಿ ವಿವರಣೆ ಕೇಳಿದೆ. 
ಎನ್ ಸಿ ಎಂ ಅಧ್ಯಕ್ಷ ಘಯೋರುಲ್ ಹಸನ್ ರಿಜ್ವಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಈ ವಿಷಯವಾಗಿ ಮಾತನಾಡಿದ್ದು, ಆಯೋಗ ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡಿದೆ. ಸಂತ್ರಸ್ತನನ್ನು ಆಸ್ಪತ್ರೆಗೆ ಕರೆದೊಯ್ಯುವುದಕ್ಕೂ ಮುನ್ನ 45 ನಿಮಿಷಗಳ ಕಾಲ ಪೊಲೀಸರು ಕಸ್ಟಡಿಯಲ್ಲಿರಿಸಿದ್ದರು, ನಿರ್ಲಕ್ಷ್ಯ ವಹಿಸಿದ್ದರು ಎಂಬ  ಬಗ್ಗೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸಂಬಂಧಪಟ್ಟ  ಅಧಿಕಾರಿಗಳಿಗೆ ಘಟನೆ ಬಗ್ಗೆ ಸಂಪೂರ್ಣ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 
SCROLL FOR NEXT