ದೇಶ

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್- 2 ಉಗ್ರರನ್ನು ಹೊಡೆದುರುಳಿಸಿದ ಸೇನೆ

Manjula VN
ಅನಂತ್'ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಬುಧವಾರ ತಿಳಿದುಬಂದಿದೆ. 
ದಕ್ಷಿಣ ಕಾಶ್ಮೀರದ ಲಾಲ್'ಚೌಕ್ ನಲ್ಲಿರುವ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. 
ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಎನ್'ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸ್ಥಳದಲ್ಲಿ ಇನ್ನೂ 2-3 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು,  ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇನ್ನು ವದಂತಿಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು, ದಕ್ಷಿಣ ಕಾಶ್ಮೀರ ಹಲವೆಡೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
SCROLL FOR NEXT