ದೇಶ

ಪ್ರಧಾನಿ ರೇಸ್ ನಲ್ಲಿ ಮಮತಾ ಮುಂಚೂಣಿಯಲ್ಲಿರುವುದು ಹೊಸದೇನಲ್ಲ: ಟಿಎಂಸಿ

Lingaraj Badiger
ಕೋಲ್ಕತಾ: ಪ್ರಾದೇಶಿಕ ಪಕ್ಷಗಳ ನಾಯಕರನ್ನು ಪ್ರಧಾನಿ ಹುದ್ದೆಗೆ ಪರಿಗಣಿಸಲು ಸಿದ್ಧ ಎಂದು ಕಾಂಗ್ರೆಸ್ ಹೇಳಿದ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿರುವುದು ಹೊಸ ವಿಚಾರ ಅಲ್ಲ ಎಂದು ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಅವರು ಬುಧವಾರ ಹೇಳಿದ್ದಾರೆ.
2018-19 ಒಕ್ಕೂಟ ವರ್ಷ ಎಂದು ನಾನು ಭಾವಿಸುತ್ತೇನೆ. ಮುಂದಿನ ವರ್ಷ ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಮತ್ತು ಅದರಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಮುಖರಾಗಿದ್ದು, ಅವರು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿರುವುದು ಹೊಸ ವಿಚಾರ ಏನಲ್ಲ ಎಂದಿದ್ದಾರೆ.
ಆದಾಗ್ಯೂ, ಪ್ರಧಾನಿ ಹುದ್ದೆಯ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದಿರುವ ಟಿಎಂಸಿ ನಾಯಕ, ಮೊದಲು ಎಲ್ಲರೂ ಬಿಜೆಪಿಯನ್ನು ಅಧಿಕಾರದಿಂದ ಕಿತ್ತುಹಾಕುವ ಬಗ್ಗೆ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ಬಗ್ಗೆ ಏನನ್ನು ಹೇಳಿಲ್ಲ. ಆದರೆ ಪ್ರಧಾನಿ ಹುದ್ದೆಗೆ ಅವರ ಹೆಸರು ಸಹ ಪ್ರಮುಖವಾಗಿ ಕೇಳಿಬರುತ್ತಿದೆ ಎಂದು ಒಬ್ರಿಯೆನ್ ಅವರು ತಿಳಿಸಿದ್ದಾರೆ.
ನಿನ್ನೆಯಷ್ಚೇ ಆರ್ ಎಸ್ಎಸ್ ಹೊರತಾದ ಯಾವುದೇ ಪ್ರಾದೇಶಿಕ ಪಕ್ಷಗಳ ನಾಯಕರನ್ನು  ಪ್ರಧಾನಿ ಹುದ್ದೆಗೆ ಪರಿಗಣಿಸಲು ಸಿದ್ಧ ಎಂದು ಕಾಂಗ್ರೆಸ್ ಹೇಳಿತ್ತು.
SCROLL FOR NEXT