ಸಂಗ್ರಹ ಚಿತ್ರ 
ದೇಶ

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಮಂದಿ ದುರ್ಮರಣ

ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ...

ರಾಯ್‌ಗಢ(ಮಹಾರಾಷ್ಟ್ರ): ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದಿದ್ದು ಪರಿಣಾಮ ಉಪನ್ಯಾಸಕರು ಸೇರಿದಂತೆ 33 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 
ಮಹಾರಾಷ್ಟ್ರದ ರಾಯಗಢದ ಅಂಬೆನಾಲಿ ಘಾಟ್ ಬಳಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಸ್ಥಳದಲ್ಲೇ 33 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. 
ಎನ್‌ಡಿಆರ್‌ಎಫ್ ತಂಡ ಘಟನಾ ಸ್ಥಳಕ್ಕೆ ತೆರಳಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಸ್ ನಲ್ಲಿ 25 ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರಯಾಣಿಸುತ್ತಿದ್ದರು. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT