ದೇಶ

ಕರುಣಾನಿಧಿ ರಕ್ತದೊತ್ತಡ ನಿಯಂತ್ರಣದಲ್ಲಿದೆ, ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ: ಕನ್ನಿಮೋಳಿ

Srinivasamurthy VN
ಚೆನ್ನೈ: ಅನಾರೋಗ್ಯಕ್ಕೆ ತುತ್ತಾಗಿ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ ಎಂ  ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಅವರ ಪುತ್ರಿ ಕನ್ನಿಮೋಳಿ ಹೇಳಿದ್ದಾರೆ.
ರಕ್ತದೊತ್ತಡ ದಿಢೀರ್ ಕಡಿಮೆಯಾದ ಕಾರಣ ಕರುಣಾನಿಧಿ ಅವರನ್ನು ಅವರ ನಿವಾಸದಿಂದ ಕಾವೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಲ್ಲದೆ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು ಅವರ ನಿವಾಸ ಮತ್ತು ಕಾವೇರಿ ಆಸ್ಪತ್ರೆ ಎದುರು ಡಿಎಂಕೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲೆ ನೆರೆದಿದ್ದು, ಡಿಎಂಕೆ ಮುಖ್ಯಸ್ಥರ ಆರೋಗ್ಯದ ಕುರಿತು ಕಳವಳದಿಂದ್ದಾರೆ.
ಈ ಹಿನ್ನಲೆಯಲ್ಲಿ ಕರುಣಾನಿಧಿ ಅವರ ಆರೋಗ್ಯದ ಕುರಿತು ಅವರ ಪುತ್ರಿ ಕನ್ನಿಮೋಳಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಬೆಂಬಲಿಗರು ಮತ್ತು ಅಭಿಮಾನಿಗಳು ಆತಂಕಗೊಳ್ಳದಂತೆ ಕಿವಿಮಾತು ಹೇಳಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ ಎ ರಾಜಾ, ರಾಜ್ಯದ ಐದು ಬಾರಿ ಮುಖ್ಯಮಂತ್ರಿಗಳಾಗಿದ್ದ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಅಪಾಯವಿಲ್ಲ. ಕಾರ್ಯಕರ್ತರು ಆತಂಕಗೊಳ್ಳಬಾರದು ಎಂದು ಹೇಳಿದ್ದಾರೆ. 
ಇನ್ನು ಕರುಣಾನಿಧಿ ಅವರು ಡಿಎಂಕೆ ಪಕ್ಷದ ಮುಖ್ಯಸ್ಥರಾಗಿ 50 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಹಮ್ಮಿಕೊಂಡಿದ್ದರಾದರೂ, ಅವರು ಆಸ್ಪತ್ರೆಗೆ ದಾಖಲಾಗಿರುವುದರಿಂದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. 
SCROLL FOR NEXT